ಲಾರಿ ಮುಷ್ಕರ - ಸಾಂದರ್ಭಿಕ ಚಿತ್ರ 
ರಾಜ್ಯ

ಇಂದಿನಿಂದ ಎರಡು ದಿನ ಲಾರಿ ಮುಷ್ಕರ

ಸರಕು ಮತ್ತು ಸೇವಾ ತೆರಿಗೆಯಲ್ಲಿನ(ಜಿಎಸ್​ಟಿ) ಅವೈಜ್ಞಾನಿಕ ಅಂಶಗಳನ್ನು ವಿರೋಧಿಸುವುದಲ್ಲದೆ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರಿಕೆಯನ್ನು ವಿರೋಧಿಸಿ..........

ಬೆಂಗಳೂರು: ಸರಕು ಮತ್ತು ಸೇವಾ ತೆರಿಗೆಯಲ್ಲಿನ(ಜಿಎಸ್​ಟಿ) ಅವೈಜ್ಞಾನಿಕ ಅಂಶಗಳನ್ನು ವಿರೋಧಿಸುವುದಲ್ಲದೆ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರಿಕೆಯನ್ನು ವಿರೋಧಿಸಿ ಇಂದಿನಿಂದ ಎರಡು ದಿನಗಳ ಕಾಲ ದೇಶವ್ಯಾಪಿ ಲಾರಿ ಮುಷ್ಕರ ನಡೆಯಲಿದೆ.
ಅಖಿಲ ಭಾರತ ಮೋಟಾರು ಟ್ರಾನ್ಸ್​ಪೋರ್ಟ್ ಕಾಂಗ್ರೆಸ್ ನೀಡಿರುವ ಈ ಮುಷ್ಕರಕ್ಕೆ ಕರೆ ನೀಡಿದ್ದು ದಕ್ಷಿಣವಲಯ ಮೋಟಾರು ಟ್ರಾನ್ಸ್ ಪೋರ್ಟರ್ಸ್ ಕ್ಷೇಮಾಭಿವೃದ್ಧಿ ಸಂಘ ಸಹ ಬೆಂಬಲ ಘೋಷಿಸಿದೆ.
ಇದರಿಂದ ಕರ್ನಾಟಕ ಸೇರಿ ಭಾರತದ ಆದ್ಯಂತ 2 ದಿನ ಲಾರಿ ಸಂಚಾರ ಸ್ಥಗಿತವಾಗಲಿದೆ. ದಿನಬಳಕೆ ವಸ್ತುಗಳ , ಸರಬರಾಜು ವ್ಯತ್ಯಯವಾಗಲಿದೆ. ಹಾಲು,ಪೆಟ್ರೋಲ್ ಹಾಗೂ ಡೀಸೆಲ್ ಲಾರಿಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಆರ್.ಷಣ್ಮುಗಪ್ಪ ತಿಳಿಸಿದ್ದಾರೆ.
ಡಿಸೇಲ್ ದರವನ್ನು ಜಿಎಸ್ ಟಿಯಿಂದ ಹೊರಗಿಟ್ಟಿರುವುದರಿಂದ ಡಿಸೇಲ್ ವಾಹನ ಬಳಸುವವರಿಗೆ ಕಷ್ಟವಾಗುತ್ತಿದೆ. ಇನ್ನು ಪೆಟ್ರೋಲ್ ಮತ್ತು ಡಿಸೆಲ್ ದರಗಳನ್ನು ನಿತ್ಯವೂ ಪರಿಷ್ಕರಣೆ ಮಾಡುವುದರಿಂದ ಡಿಸೇಲ್ ಬೆಲೆಯಲ್ಲಿ ದಿನ ದಿನವೂ ಏರಿಕೆ ಆಗುತ್ತಿದೆ. ಇದು ಲಾರಿ ಮಾಲಿಕರು ಸೇರಿ ಗ್ರಾಹಕರಿಗೆ ಹೊರೆಯಾಗುತ್ತಿದೆ ಎಂದು ಟ್ರಕ್ಕರ್ಸ್ ಅಸೋಸಿಯೇಷನ್ ತಿಳಿಸಿದೆ.
ಮುಷ್ಕರ ನಿರತರ ಪ್ರಮುಖ ಬೇಡಿಕೆಗಳು ಹೀಗಿವೆ-
  • ಹೆಚ್ಚುವರಿ ತೆರಿಗೆ ಸಂಗ್ರಹ ನಿಲ್ಲಿಸಬೇಕು.
  • ದೇಶವ್ಯಾಪಿ ಏಕ ರೂಪದ ಡೀಸೆಲ್ ದರ ಜಾರಿಗೆ ಬರಬೇಕು.
  • 347 ಹೆದ್ದಾರಿ ಟೋಲ್ ರದ್ದುಪಡಿಸಿ ವಾರ್ಷಿಕ ಒಂದು ಬಾರಿ ಟೋಲ್ ನಿಯಮ ಜಾರಿ ಮಾಡಬೇಕು.
  • ಹೆದ್ದಾರಿಗಳಲ್ಲಿ ಸಾರಿಗೆ ಅಧಿಕಾರಿಗಳು ನೀಡುವ ಕಿರುಕುಳ ನಿಲ್ಲಿಸಬೇಕು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

SCROLL FOR NEXT