ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ವಿವಾದ, ವಿರೋಧದ ನಡುವೆಯೂ ನಟ ಪ್ರಕಾಶ್ ರೈಗೆ ಶಿವರಾಮ ಕಾರಂತ ಪ್ರಶಸ್ತಿ ಪ್ರದಾನ

ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ ಪ್ರಕಾಸ್ ರೈಗೆ ತೀವ್ರ ವಿರೋಧದ ನಡುವೆಯೂ...

ಪ್ರಕಾಶ್ ರೈ
Vishwanath S
Updated On : 10 Oct 2017, 5:53 am
ಉಡುಪಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ ಪ್ರಕಾಸ್ ರೈಗೆ ತೀವ್ರ ವಿರೋಧದ ನಡುವೆಯೂ ಡಾ. ಶಿವರಾಮ ಕಾರಂತ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ. 
ಜ್ಞಾನಪೀಠ ಪ್ರಶಸ್ತಿ ವಿಜೇತ ಶಿವರಾಮ ಕಾರಂತರ ಗೌರವಾರ್ಥವಾಗಿ ಸಾಧಕರಿಗೆ ಕಳೆದ 10 ವರ್ಷಗಳಿಂದ ಈ ಪ್ರಶಸ್ತಿಯನ್ನು ನೀಡಲಾಗುತ್ತಿತ್ತು. ಈ ಹಿಂದೆ ಪ್ರಕಾಶ್ ರೈಗೆ ಪ್ರಶಸ್ತಿ ನೀಡಬೇಕು ಎಂದು ಸಮಿತಿ ತೀರ್ಮಾನಿಸಿತ್ತು. ಅಂತೇ ಇಂದು ಬಿಜೆಪಿ ಹಾಗೂ ನಾಥಪಂಥದವರ ತೀವ್ರ ವಿರೋಧದ ನಡುವೆಯೂ ಪ್ರಶಸ್ತಿ ಪ್ರದಾನ ಮಾಡಲಾಗಿದೆ. 
ಪ್ರಶಸ್ತಿ ಪಡೆದ ನಂತರ ಮಾತನಾಡಿದ ಪ್ರಕಾಶ್ ರೈ ಅವರು ಶಿವರಾಮ ಕಾರಂತರ ಹುಟ್ಟೂರು ಪ್ರಶಸ್ತಿ ಸ್ವೀಕರಿಸುತ್ತಿರುವುದಕ್ಕೆ ಹೆಚ್ಚು ಸಂತಸವಾಗಿದೆ. ಇದು ಸೃಜನಶೀಲ ವ್ಯಕ್ತಿತ್ವಕ್ಕೆ ಸಂದ ಜಯ. ನನಗೆ ಹಲವಾರು ಪ್ರಶಸ್ತಿಗಳು ಬಂದಿವೆ. ಆದರೆ ಈ ಪ್ರಶಸ್ತಿ ಅವುಗಳಿಗಿಂತ ಹೆಚ್ಚು ಸಂತಸ ತಂದಿದೆ ಎಂದರು. 

Advertisement

Advertisement

ಇನ್ನು ತಮ್ಮ ಭಾಷಣಕ್ಕೂ ಮುನ್ನ ಪ್ರಕಾಶ್ ರೈ ಪ್ರಶಸ್ತಿ ಸಮಿತಿ, ಸಭಿಕರು ಮತ್ತು ಆಯೋಜಕರಲ್ಲಿ ನನ್ನಿಂದ ನಿಮಗೆ ನೋವಾಗಿದ್ದರೆ, ನೀವು ಆತಂಕಕ್ಕೆ ಒಳಗಾಗಿದ್ದರೆ ನನ್ನನ್ನು ಕ್ಷಮಿಸಿ ಎಂದರು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments