ಯುಟಿ ಖಾದರ್ 
ರಾಜ್ಯ

‘ಮುಖ್ಯಮಂತ್ರಿ ಅನಿಲ ಭಾಗ್ಯ’ಯೋಜನೆಯಡಿ ಎರಡು ಬಾರಿ ಅನಿಲ ಭರ್ತಿ ಉಚಿತ

ಬಿಪಿಎಲ್‌ ಕುಟುಂಬಗಳಿಗೆ ಉಚಿತ ಅಡುಗೆ ಅನಿಲ ಸಂಪರ್ಕ, ಸಿಲಿಂಡರ್‌, ಒಲೆ ವಿತರಿಸುವ ‘ಮುಖ್ಯಮಂತ್ರಿ ಅನಿಲ ಭಾಗ್ಯ’ ಯೋಜನೆ....

ಬೆಂಗಳೂರು: ಬಿಪಿಎಲ್‌ ಕುಟುಂಬಗಳಿಗೆ ಉಚಿತ ಅಡುಗೆ ಅನಿಲ ಸಂಪರ್ಕ, ಸಿಲಿಂಡರ್‌, ಒಲೆ ವಿತರಿಸುವ ‘ಮುಖ್ಯಮಂತ್ರಿ ಅನಿಲ ಭಾಗ್ಯ’ ಯೋಜನೆ ಇದೇ ಡಿಸೆಂಬರ್‌ನಿಂದ ಜಾರಿಗೆ ಬರಲಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್ ಅವರು ಹೇಳಿದ್ದಾರೆ. 
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಖಾದರ್ ಅವರು, ಅಡುಗೆ ಅನಿಲ ಸಂಪರ್ಕ ಹೊಂದದೆ ಇರುವ ಬಿಪಿಎಲ್ ಕುಟುಂಬದವರು ಇದೇ ತಿಂಗಳಿನಿಂದ ಸಂಬಂಧಪಟ್ಟ ಗ್ರಾಮ ಪಂಚಾಯಿತಿಯಲ್ಲಿ ಅರ್ಜಿ ಸಲ್ಲಿಸಬಹುದು. ಆಹಾರ ಇಲಾಖೆ ಹಾಗೂ ಸಂಬಂಧಿಸಿದ ಅನಿಲ ವಿತರಕರು ಅರ್ಜಿ ಹಾಗೂ ದಾಖಲೆಗಳನ್ನು ಪರಿಶೀಲಿಸಲಿದ್ದಾರೆ. ಬಳಿಕ, ಅರ್ಹ ಫಲಾನುಭವಿಗಳಿಗೆ 14.2 ಕೆ.ಜಿ ಅನಿಲ ಸಿಲಿಂಡರ್‌, ಒಲೆ, ರೆಗ್ಯುಲೇಟರ್‌ಗಳನ್ನು ವಿತರಿಸಲಾಗುವುದು. ಅಲ್ಲದೆ ಉಚಿತವಾಗಿ ಎರಡು ಬಾರಿ ಸಿಲಿಂಡರ್ ಭರ್ತಿ ಮಾಡಿಕೊಡಲಾಗುವುದು ಎಂದು ತಿಳಿಸಿದರು.
‘ಮುಖ್ಯಮಂತ್ರಿ ಅನಿಲ ಭಾಗ್ಯ’ಯೋಜನೆ ಜಾರಿಗೆ ತರುವುದಕ್ಕಾಗಿ ಹೆಚ್ಚುವರಿಯಾಗಿ 1 ಲಕ್ಷ ಸಿಲಿಂಡರ್ ಗಳನ್ನು ನೀಡುವಂತೆ ಕೇಂದ್ರ ಪೆಟ್ರೋಲಿಯಂ ಸಚಿವಾಲಯಕ್ಕೆ ಕೇಳಿಕೊಂಡಿದ್ದೇವೆ ಎಂದು ಸಚಿವರು ಹೇಳಿದ್ದಾರೆ.
ಇದೇ ವೇಳೆ, ಕೇಂದ್ರ ಸರ್ಕಾರದ ‘ಉಜ್ವಲ ಯೋಜನೆ’ಯಲ್ಲಿ ಸಿಲಿಂಡರ್ ಮತ್ತು ಅನಿಲ ಸಂಪರ್ಕ ಪಡೆದವರಿಗೆ  ಉಚಿತವಾಗಿ ಒಲೆ ವಿತರಿಸಲು ನಿರ್ಧರಿಸಲಾಗಿತ್ತು. ಆದರೆ, ಉಜ್ವಲ ಯೋಜನೆಯ ಸೌಲಭ್ಯ ರಾಜ್ಯದ ಎಲ್ಲ ಬಿಪಿಎಲ್‌ ಕುಟುಂಬಗಳಿಗೆ ಸಿಗುವುದಿಲ್ಲ ಎಂಬ ಕಾರಣಕ್ಕೆ ರಾಜ್ಯ ಸರ್ಕಾರ ‍ಪ್ರತ್ಯೇಕವಾಗಿಯೇ ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆ ಅನುಷ್ಠಾನಗೊಳಿಸಲು ತೀರ್ಮಾನಿಸಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ