ಸಾಂದರ್ಭಿಕ ಚಿತ್ರ 
ರಾಜ್ಯ

ಇನ್ನೂ 2 ದಿನ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಹೆಚ್ಚು ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ನೈಋತ್ಯ ಮುಂಗಾರು ಕ್ಷೀಣಿಸುತ್ತಿದ್ದಂತೆ ಮುಂದಿನ ಎರಡು ದಿನಗಳಲ್ಲಿ ಬೆಂಗಳೂರಿನ ಮತ್ತು ಕರ್ನಾಟಕದ ಇತರ ಭಾಗಗಳಲ್ಲಿ ಮಳೆಯ ಪ್ರಮಾಣ ತಗ್ಗಲಿದೆ...

ಬೆಂಗಳೂರು: ನೈಋತ್ಯ ಮುಂಗಾರು ಕ್ಷೀಣಿಸುತ್ತಿದ್ದಂತೆ ಮುಂದಿನ ಎರಡು ದಿನಗಳಲ್ಲಿ ಬೆಂಗಳೂರಿನ ಮತ್ತು ಕರ್ನಾಟಕದ ಇತರ ಭಾಗಗಳಲ್ಲಿ ಮಳೆಯ ಪ್ರಮಾಣ ತಗ್ಗಲಿದೆ ಎಂದು ನಿರೀಕ್ಷಿಸಲಾಗಿದೆ.  ಆದರೆ ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಮುಂದಿನ 5 ದಿನಗಳ ಕಾಲ ರಾಜ್ಯದ ನಾನಾ ಕಡೆ ಸಾಕಷ್ಟು ಮಳೆ ಆಗಲಿದೆ.
ಏತನ್ಮಧ್ಯೆ, ದಕ್ಷಿಣ ಬೆಂಗಳೂರಿನ ಭಾಗಗಳಲ್ಲಿ ಮಂಗಳವಾರ ಮತ್ತು ಬುಧವಾರದಂದು ಭಾರೀ ಮಳೆ ಆಗುವ ನಿರೀಕ್ಷೆ ಇದೆ.  ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ ವಿಜ್ಞಾನಿ ಎಸ್.ಎಸ್.ಎಂ. ಗವಾಸ್ಕರ್ ಅವರು ಮುಂದಿನ ಎರಡು ದಿನಗಳಲ್ಲಿ ಭಾರಿ ಮಳೆ ಮುನ್ಸೂಚನೆ ಇದೆ ಎಂದು ತಿಳಿಸಿದ್ದಾರೆ. "ನೈಋತ್ಯ ಮುಂಗಾರು ಕ್ಷೀಣಿಸುವ ಮುನ್ನ ಅವಧಿಯಲ್ಲಿ, ದಕ್ಷಿಣ ಒಳನಾಡು ಪ್ರದೇಶದಲ್ಲಿ  ಸಾಮಾನ್ಯವಾಗಿ ಉತ್ತಮ ಮಳೆ ಆಗಲಿದೆ"
ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕರಾವಳಿ ತೀರದಲ್ಲಿ ಈ ಅವಧಿಯಲ್ಲಿ ಉತ್ತಮ ಮಳೆ ಬೀಳುವ ವಾತಾವರಣವಿದ್ದು ಇದರಿಂದ ರಾಜ್ಯದಲ್ಲಿಯೂ ಮಳೆ ಆಗಲಿದೆ. ಗೋವಾದ ಉತ್ತರ ಬಾಗ ಮತ್ತು ಮಧ್ಯ ಮಹಾರಾಷ್ಟ್ರ  ಗಳಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ ಬೀಸುವ ಸಾಧ್ಯತೆಯೂ ಇದೆ ಎಂದು ಅವರು ಹೇಳಿದರು.
ನೈರುತ್ಯ ಮಾನ್ಸೂನ್ ನಿಧಾನವಾಗಿ ಹಿಂದೆ ಸರಿಯುತ್ತಿದ್ದು ಅ.15 ರಿಂದ 18 ರ ನಡುವೆ ರಾಜ್ಯದಿಂದ ದೂರಾಗುವ ಸಾಧ್ಯತೆ ಇದೆ ಎಂಡರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್