ವಿಕೆ. ಶಶಿಕಲಾ 
ರಾಜ್ಯ

ಪೆರೋಲ್ ಮುಕ್ತಾಯ; ಮತ್ತೆ ಪರಪ್ಪನ ಅಗ್ರಹಾರ ಜೈಲು ಸೇರಿದ ಶಶಿಕಲಾ

ಅನಾರೋಗ್ಯದಿಂದ ಬಳಲುತ್ತಿರುವ ಪತಿ ನಟರಾಜನ್ ಅವರ ಭೇಟಿಗಾಗಿ ಐದು ದಿನಗಳ ಪೆರೋಲ್ ಮೇಲೆ ಬಿಡುಗಡೆಯಾಗಿದ್ದ...

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿರುವ ಪತಿ ನಟರಾಜನ್ ಅವರ ಭೇಟಿಗಾಗಿ ಐದು ದಿನಗಳ ಪೆರೋಲ್ ಮೇಲೆ ಬಿಡುಗಡೆಯಾಗಿದ್ದ ಎಐಎಡಿಎಂಕೆ ಉಚ್ಚಾಟಿತ ಪ್ರಧಾನ ಕಾರ್ಯದರ್ಶಿ ಶಶಿಕಲಾ ಅವರು ಗುರುವಾರ ಮತ್ತೆ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ.
ಶಶಿಕಲಾ ಅವರ 5 ದಿನಗಳ ಪರೋಲ್ ಅವಧಿ ಇಂದಿಗೆ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಎಐಎಡಿಎಂಕೆ ನಾಯಕಿ ಇಂದು ಸಂಜೆ 4.30ರ ಸುಮಾರಿಗೆ ಪರಪ್ಪನ ಅಗ್ರಹಾರ ಜೈಲಿಗೆ ವಾಪಸಾಗಿದ್ದಾರೆ ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ.
ಪರೋಲ್ ಅವಧಿಯಲ್ಲಿ ಶಶಿಕಲಾ ಅವರು ಯಾವುದೇ ಷರತ್ತುಗಳನ್ನು ಮತ್ತು ನಿಯಮಗಳನ್ನು ಉಲ್ಲಂಘಿಸಿಲ್ಲ ಎಂದು ಬೆಂಗಳೂರು ಕೇಂದ್ರ ಕಾರಾಗೃಹದ ಅಧೀಕ್ಷಕ ಜಿ ಸೋಮಶೇಖರ್ ಅವರು ಐಎಎನ್ಎಸ್ ಗೆ ತಿಳಿಸಿದ್ದಾರೆ.
ನಟರಾಜನ್ ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಚೆನ್ನೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಶಶಿಕಲಾ ನಟರಾಜನ್ ಗೆ 5 ದಿನಗಳ ಪೆರೋಲ್ ನ್ನು ಮಂಜೂರು ಮಾಡಲಾಗಿತ್ತು. 
ಪರೋಲ್ ಮಂಜೂರು ಮಾಡುವುದಕ್ಕೂ ಮುನ್ನ ನ್ಯಾಯಾಲಯಕ ಕೆಲ ಕಠಿಣ ಷರತ್ತುಗಳನ್ನು ವಿಧಿಸಿತ್ತು. ಪತಿ ನಟರಾಜನ್ ಅವರ ಆರೋಗ್ಯ ವಿಚಾರಿಸುವುದರ ಹೊರತಾಗಿ ಎಐಎಡಿಎಂಕೆ ಪಕ್ಷದ ಯಾವುದೇ ಚಟುವಟಿಕೆ, ಸಭೆ, ಸಮಾಲೋಚನೆ ಹಾಗೂ ಮಾಧ್ಯಮಗಳೊಂದಿಗೆ ಮಾತನಾಡುವಂತಿಲ್ಲ ಎಂದು ಷರತ್ತುಗಳನ್ನು ವಿಧಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!