ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿರುವ ಪತಿ ನಟರಾಜನ್ ಅವರನ್ನು ನೋಡುವ ಸಲುವಾಗಿ ಎಐಎಡಿಎಂಕೆ ಉಚ್ಛಾಟಿತ ಪ್ರಧಾನ ಕಾರ್ಯದರ್ಶಿ ಶಶಿಕಲಾ ಅವರಿಗೆ ನೀಡಲಾಗಿದ್ದ 5 ದಿನಗಳ ಪರೋಲ್ ಅವಧಿ ಮುಕ್ತಾಯಗೊಂಡಿದ್ದು, ಮತ್ತೆ ನಗರದ ಪರಪ್ಪನ ಅಗ್ರಹಾರದತ್ತ ಮರಳಿದ್ದಾರೆಂದು ಗುರುವಾರ ತಿಳಿದುಬಂದಿದೆ.
ಶಶಿಕಲಾ ಆವರ ಪೆರೋಲ್ ಅವಧಿ ಇಂದಿಗೆ ಮುಕ್ತಾಯಗೊಳ್ಳುತ್ತಿರುವ ಹಿನ್ನಲೆಯಲ್ಲಿ ಸಂಜೆ 6 ಗಂಟೆಯೊಳಗಾಗಿ ಪರಪ್ಪನ ಅಗ್ರಹಾರ ಜೈಲಿಗೆ ವಾಪಸಾಗಬೇಕಿದೆ.
ನಟರಾಜನ್ ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಚೆನ್ನೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಶಶಿಕಲಾ ನಟರಾಜನ್ ಅವರಿಗೆ 5 ದಿನಗಳ ಪೆರೋಲ್ ನ್ನು ಮಂಜೂರು ಮಾಡಲಾಗಿತ್ತು.
ಪರೋಲ್ ಮಂಜೂರು ಮಾಡುವುದಕ್ಕೂ ಮುನ್ನ ನ್ಯಾಯಾಲಯಕ ಕೆಲ ಕಠಿಣ ಷರತ್ತುಗಳನ್ನು ವಿಧಿಸಿತ್ತು. ಪತಿ ನಟರಾಜನ್ ಅವರ ಆರೋಗ್ಯ ವಿಚಾರಿಸುವುದರ ಹೊರತಾಗಿ ಎಐಎಡಿಎಂಕೆ ಪಕ್ಷಯ ಯಾವುದೇ ಚಟುವಟಿಕೆ, ಸಭೆ, ಸಮಾಲೋಚನೆ ಹಾಗೂ ಮಾಧ್ಯಮಗಳೊಂದಿಗೆ ಮಾತನಾಡುವಂತಿಲ್ಲ ಎಂದು ಷರತ್ತುಗಳನ್ನು ವಿಧಿಸಿತ್ತು. ನ್ಯಾಯಾಲಯದ ಷರತ್ತಿನಂತೆಯೇ ಶಶಿಕಲಾ ಅವರು 5 ದಿನ ಮನೆಯಿಂದ ಆಸ್ಪತ್ರೆಗೆ ಭೇಟಿ ನೀಡುತ್ತಿದ್ದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos