ರಾಮಲಿಂಗಾ ರೆಡ್ಡಿ 
ರಾಜ್ಯ

ಹದಗೆಟ್ಟ ಬೆಂಗಳೂರು ರಸ್ತೆಗಳು: ಸರ್ಕಾರದ ಸಮರ್ಥನೆಗೆ ನಿಂತ ರಾಮಲಿಂಗಾ ರೆಡ್ಡಿ

ಬೆಂಗಳೂರು ರಸ್ತೆಗಳ ದುಸ್ಥಿತಿ ವಿರುದ್ಧ ಬಿಜೆಪಿ ಟೀಕೆಗೆ ಪ್ರತಿಯಾಗಿ ಗೃಹ ಸಚಿವ ರಾಮಲಿಂಗಾ ರೆಡ್ಡಿ ರಾಜ್ಯ ಸರ್ಕಾರವನ್ನು ಸಮರ್ಥಿಸಿಕೊಂಡಿದ್ದಾರೆ..,..

ಬೆಂಗಳೂರು:  ಬೆಂಗಳೂರು ರಸ್ತೆಗಳ ದುಸ್ಥಿತಿ ವಿರುದ್ಧ ಬಿಜೆಪಿ ಟೀಕೆಗೆ ಪ್ರತಿಯಾಗಿ ಗೃಹ ಸಚಿವ ರಾಮಲಿಂಗಾ ರೆಡ್ಡಿ ರಾಜ್ಯ ಸರ್ಕಾರವನ್ನು ಸಮರ್ಥಿಸಿಕೊಂಡಿದ್ದಾರೆ. ಸತತವಾಗಿ ಮಳೆ ಸುರಿಯುತ್ತಿರುವುದು ನೈಸರ್ಗಿಕ ವಿಕೋಪದಿಂದ ಎಂದು ಹೇಳಿದ್ದಾರೆ.
ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಮಳೆಯಿಂದಾಗಿ ಚೆನ್ನೈ, ಮುಂಬಯಿಗಳಲ್ಲಿ ಸಮಸ್ಯೆ ಉಂಟಾಗಿತ್ತು,. ಆದರೆ ಬೆಂಗಳೂರಿನಲ್ಲಿ ಮಾತ್ರ ಅಧಿಕ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಆಗಸ್ಟ್ 15 ರಿಂದ ಸುಪಮಾರು 46 ದಿನಗಳು ಸತತವಾಗಿ ಮಳೆಯಾಗಿದೆ, ಇದು ನೈಸರ್ಗಿಕ ವಿಕೋಪವಾಗಿದೆ. ಹೀಗಾದಾಗ ರಾಜಕೀಯ ಪಕ್ಷಗಳನ್ನು ಟಾರ್ಗೆಟ್ ಮಾಡುವುದು ಸರಿಯಲ್ಲ, ಎಲ್ಲಾ  ಪಕ್ಷಗಳು ಒಟ್ಟಿಗೆ ಸೇರಿ ಸಮಸ್ಯೆ ವಿರುದ್ಧ ಹೋರಾಡಬೇಕು, ಅದನ್ನು ಬಿಟ್ಟು ಬೇರೆಯವರ ವಿರುದ್ಧ ಬೆರಳು ಮಾಡಿ ತೋರಿಸಬಾರದು ಎಂದು ಹೇಳಿದ್ದಾರೆ.
ನಮ್ಮನ್ನು ಟೀಕಿಸುವುದು ಯಡಿಯೂರಪ್ಪ ಅವರಿಗೆ ಶೋಭೆ ತರುವಂತದ್ದಲ್ಲ, ಅದನ್ನು ಬಿಟ್ಟು ತಮ್ಮ ಪಕ್ಷದ ಶಾಸಕರು ಮತ್ತು ಕಾರ್ಪೋರೇಟರ್ ಗಳು ಅವರವರ ಕ್ಷೇತ್ರದಲ್ಲಿ ಕೆಲಸ ಮಾಡುವಂತೆ ಸೂಚಿಸಬೇಕು ಎಂದು ಹೇಳಿದ್ದಾರೆ,
ಸಮಸ್ಯೆ ಬಗೆಹರಿಸಲು  ನಗರ ಬಿಜೆಪಿ ಪ್ರತಿನಿಧಿಗಳ ಸಭೆ ಕರೆದಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಈ ಸಂಬಂಧ ನಾವು ಅವರೊಂದಿಗೆ ಮಾತನಾಡಿಲ್ಲ, ಬಿಜೆಪಿಯ 12 ಶಾಸಕರಿಗೆ ಅನುದಾನ ನೀಡಲಾಗಿದೆ, ಶಾಸಕರು ಮತ್ತು ಸಂಸದರ ನಿಧಿಯ ಹಣ ಬಳಸಿಕೊಂಡು ಅವರೇ ಸಮಸ್ಯೆ ಬಗೆಹರಿಸಲಿ ಎಂದು ರೆಡ್ಡಿ ತಿಳಿಸಿದ್ದಾರೆ. 
2013 ರಿಂದ ಬಿಬಿಎಂಪಿಯ ರಸ್ತೆ ಸೇರಿದಂತೆ ವಿವಿಧ ಕಾಮಗಾರಿಗಳಿಗಾಗಿ ಒಟ್ಟು 1,750 ಕೋಟಿ ರು ಹಣ ವ್ಯಯಿಸಿದ್ದಾರೆ, ಇದಕ್ಕಾಗಿ  ಒಟ್ಟು 3, 750 ಕೋಟಿ ರು ಹಣ ಅನುದಾನವಾಗಿ ನೀಡಲಾಗಿತ್ತು, ಅದರಲ್ಲಿ ಇನ್ನೂ 2,ಸಾವಿರ ಕೋಟಿ ರು ಹಣವನ್ನು ವೆಚ್ಚ ಮಾಡದೇ ಉಳಿಸಿಕೊಳ್ಳಲಾಗಿದೆ. ರಸ್ತೆ ಗುಂಡಿ ಮುಚ್ಚಲು ನಾವು 4 ಸಾವಿರ ಕೋಟಿ ವೆಚ್ಚ ಮಾಡಿದ್ದೇವೆ ಎಂದು ಆರೋಪಿಸಲಾಗುತ್ತಿದೆ, ಅದೆಲ್ಲಾ ಆಧಾರರಹಿತ ಆರೋಪವಾಗಿದೆ ಎಂದು ತಿಳಿಸಿದ್ದಾರೆ.
ಸರಿಯಾಗಿ ಕಾಮಗಾರಿ ನಿರ್ವಹಿಸದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ರೆಡ್ಡಿ, ಅದನ್ನು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ ಜಾರ್ಜ್ ಶೀಘ್ರದಲ್ಲೆ ಮಾಡಲಿದ್ದಾರೆ ಎಂದು ವಿವರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT