ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ
ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ(ಕೆಎಸ್ಒಯು)ವನ್ನು ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ಭರವಸೆ ನೀಡಿದ್ದಾರೆ.
ಕೆಎಸ್ಒಯು ಮುಚ್ಚವ ಪ್ರಸ್ತಾವನೆ ಕೇಂದ್ರ ಸರ್ಕಾರದ ಮುಂದೆ ಇಲ್ಲ. ಮೂರೂವರೆ ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ನಮಗೂ ಕಾಳಜಿಯಿದೆ. ಕೆಎಸ್ಒಯು ಪುನರಾರಂಭ ಮಾಡಲು ಅಗತ್ಯ ಕ್ರಮಕೈಗೊಳ್ಳುತ್ತೇವೆ ಎಂದು ವಿದ್ಯಾರ್ಥಿಗಳಿಗೆ ಜಾವಡೇಕರ್ ಆಶ್ವಾಸನೆ ನೀಡಿದ್ದಾರೆ.
ಕೆಎಸ್ಒಯುನಲ್ಲಿ 580 ಕೋಟಿ ಮೊತ್ತದ ಭ್ರಷ್ಟಾಚಾರ ನಡೆದಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಈ ಹಗರಣ ಕುರಿತು ನಾಲ್ಕು ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ. ಆಂತರಿಕ ಲೆಕ್ಕ ಪರಿಶೋಧನಾ ವರದಿಯಲ್ಲಿ ಕೆಲವು ಗೊಂದಲಗಳಿವೆ. ಈ ಎಲ್ಲವನ್ನು ಪರಿಶೀಲಿಸಿ ವಿಶ್ವವಿದ್ಯಾಲಯ ಅನುದಾನ ಆಯೋಗ(ಯುಜಿಸಿ) ವರದಿ ಸಲ್ಲಿಸಲಿದೆ. ಆ ವರದಿ ಆಧರಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಜಾವಡೇಕರ್ ಅವರನ್ನು ಕೆಎಸ್ಒಯು ಕುಲಪತಿ ಪ್ರೊ.ಡಿ ಶಿವಲಿಂಗಯ್ಯ ನೇತೃತ್ವದಲ್ಲಿ ಕೆಎಸ್ಒಯು ಸಿಬ್ಬಂದಿ ಮತ್ತು ವಿದ್ಯಾರ್ಥಿಗಳ ನಿಯೋಗ ಭೇಟಿ ಮಾಡಿ ಈ ಸಂಬಂಧ ಮನವಿ ಸಲ್ಲಿಸಿತ್ತು.