ರಾಮನಗರದಲ್ಲಿ ಸುರಿದ ಮಳೆಗೆ ಮನೆಯೊಂದರ ಸಮೀಪ ಮಣ್ಣು ಕುಸಿದು ಬಿದ್ದ ಸಾಂದರ್ಭಿಕ ಚಿತ್ರ 
ರಾಜ್ಯ

ರಾಮನಗರ: ಮಳೆಗೆ ಮೂವರು ಬಲಿ

ರಾಮನಗರ ತಾಲ್ಲೂಕಿನ ತಿಮ್ಮಸಂದ್ರ ಗ್ರಾಮದ ಬಳಿ ಹಳ್ಳದಲ್ಲಿ ಮಳೆ ನೀರು ಹರಿಯುವುದನ್ನು

ರಾಮನಗರ: ಜಿಲ್ಲೆಯಾದ್ಯಂತ ಸುರಿದ ಮಳೆಗೆ ಮೂವರು ಬಲಿಯಾಗಿದ್ದಾರೆ. ರಾಮನಗರ ತಾಲ್ಲೂಕಿನ ತಿಮ್ಮಸಂದ್ರ ಗ್ರಾಮದ ಬಳಿ ಹಳ್ಳದಲ್ಲಿ ಮಳೆ ನೀರು ಹರಿಯುವುದನ್ನು ಕಾಣಲು ಹೋಗಿದ್ದ ವೇಳೆ ಮಣ್ಣಿನ ದಿಬ್ಬ ಕುಸಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಅರಳೀಮರದ ದೊಡ್ಡಿ ಗ್ರಾಮದ ನಿವಾಸಿ ನಂದೀಶ್ (40) ಮೃತರು. 


ಇಂದು ಬೆಳಿಗ್ಗೆ 9ರ ಸುಮಾರಿಗೆ ಮೊಬೈಲ್‌ನಲ್ಲಿ ಹಳ್ಳದ ಚಿತ್ರ ತೆಗೆಯುವಲ್ಲಿ ಮೈಮರೆತ ಸಂದರ್ಭ ಈ ಘಟನೆ ನಡೆಯಿತು ಎಂದು ಸ್ಥಳೀಯರು ತಿಳಿಸಿದರು. ಶವವನ್ನು ಹೊರಗೆ ತೆಗೆಯುವ ಕಾರ್ಯಾಚರಣೆ ನಡೆದಿದೆ.

ಸ್ಥಳಕ್ಕೆ ರಾಮನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದಾರೆ.ಬಿಡದಿಯ ನೆಲ್ಲಿಗುಡ್ಡ  ಕೆರೆಯಲ್ಲಿ  ಶನಿವಾರ ಸಂಜೆ ಮೀನಿನ  ಬಲೆ ಹಾಕಲು  ತೆರಳಿದ್ದ ಇಬ್ಬರು ಯುವಕರು ದೋಣಿ ಸಮೇತ ಕಾಣೆಯಾಗಿದ್ದಾರೆ.

ಅವರೆಗೆರೆ ಗ್ರಾಮದ ಉಮೇಶ(32) ಮತ್ತು ರವಿ(19)  ಕಾಣೆಯಾದವರು. ಇತ್ತೀಚೆಗೆ ಕೋಡಿ ಹೊಡೆದಿದ್ದ ಕೆರೆಯ ನೀರಿನಲ್ಲಿ ಇಬ್ಬರೂ ಮುಳುಗಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶೋಧ ಕಾರ್ಯಾಚರಣೆ ನಡೆದಿದೆ.‌

ವಿದ್ಯುತ್ ತಗುಲಿ ಯುವಕ ಸಾವು
ಬಸವಕಲ್ಯಾಣದಲ್ಲಿ ನಿನ್ನೆ ಎಂಜಿನಿಯೆರಿಂಗ್ ಕಾಲೇಜಿನ ಕಟ್ಟಡದಲ್ಲಿ ನಿಂತಿದ್ದ ಮಳೆ ನೀರು ಖಾಲಿ ಮಾಡುವಾಗ ವಿದ್ಯುತ್ ಪ್ರವಹಿಸಿ ಯುವಕನೊಬ್ಬ ಮೃತಪಟ್ಟಿದ್ದಾನೆ. ಕೌಡಿಯಾಳದ ಅವಿನಾಶಿ ಹಿರೊಳ್ಳೆ (23) ಸಾವಿಗೀಡಾಗಿದ್ದು, ಬಸವಕಲ್ಯಾಣ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ