ಸಾಂದರ್ಭಿಕ ಚಿತ್ರ 
ರಾಜ್ಯ

ಮಂಡ್ಯ: ವೈದ್ಯರಿಲ್ಲದೇ ಸರ್ಕಾರಿ ಆಸ್ಪತ್ರೆ ಮುಂದೆ ಗಂಟೆಗಟ್ಟಲೇ ನರಳಾಡಿದ ಗರ್ಭಿಣಿ

ವೈದ್ಯರಿಲ್ಲದ ಕಾರಣ ಸರ್ಕಾರಿ ಆಸ್ಪತ್ರೆಯ ಮುಂಭಾಗದಲ್ಲಿ 22 ವರ್ಷದ ಗರ್ಭಿಣಿಯೊಬ್ಬರು ಹೆರಿಗೆ ನೋವಿನಿಂದ ಗಂಟೆಗೂ ಹೆಚ್ಚು ಕಾಲ ನರಳಾಡಿದ ಘಟನೆ ..

ಮಂಡ್ಯ: ವೈದ್ಯರಿಲ್ಲದ ಕಾರಣ ಸರ್ಕಾರಿ ಆಸ್ಪತ್ರೆಯ ಮುಂಭಾಗದಲ್ಲಿ 22 ವರ್ಷದ ಗರ್ಭಿಣಿಯೊಬ್ಬರು ಹೆರಿಗೆ ನೋವಿನಿಂದ ಗಂಟೆಗೂ ಹೆಚ್ಚು ಕಾಲ ನರಳಾಡಿದ ಘಟನೆ ಮಂಡ್ಯದಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಬೆಳಕವಾಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹೆರಿಗೆ ನೋವು ಕಾಣಿಸಿಕೊಂಡಿದ್ದರಿಂದ ಗರ್ಭಿಣಿ ಮಹಿಳೆಯರನ್ನು ಅವರ ಪೋಷಕರು  ಬೆಳಗ್ಗೆ 7.30 ರ ವೇಳೆಗೆ ಆಸ್ಪತ್ರೆಗೆ ಕರೆ ತಂದಿದ್ದರು. ಆದರೆ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೇ ಆಸ್ಪತ್ರೆ ಮುಚ್ಚಿದ್ದ ಕಾರಣ ಆಸ್ಪತ್ರೆಯ ಮುಂಭಾಗದಲ್ಲೇ ಗರ್ಭಿಣಿ ನರಳಾಡಿದ್ದಾರೆ.
ಬೇರೆ ಆಸ್ಪತ್ರೆಗೆ ಕರೆದೊಯ್ಯಲು ಆಂಬ್ಯುಲೆನ್ಸ್​ ನೀಡುವಂತೆ ಮನವಿ ಮಾಡಿದರೆ, ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್​ ಕೆಟ್ಟುಹೋಗಿದೆ ಎಂದು ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಸ್ಥಳೀಯ ಮಾಧ್ಯಮಗಳು ಮಳವಳ್ಳಿ ತಾಲೂಕು ಆಸ್ಪತ್ರೆ ಸಂಪರ್ಕಿಸಿ ಅಲ್ಲಿಂದ ಆಂಬುಲೆನ್ಸ್ ವ್ಯವಸ್ಥೆ ಮಾಡಿದ್ದಾರೆ.  ನಂತರ ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!