ಬೆಂಗಳೂರು: ಕಟ್ಟಡ ಕುಸಿತದಲ್ಲಿ ಬದುಕುಳಿದಿದ್ದ ಬಾಲಕಿ ಸಂಜನಾ ಸಾವು
ಬೆಂಗಳೂರಿನ ಈಜಿಪುರದ ಗುಂಡಪ್ಪ ಲೇಔಟ್‌ನಲ್ಲಿ ಸಿಲಿಂಡರ್ ಸ್ಫೋಟದಿಂದಾಗಿ ಎರಡು ಅಂತಸ್ತಿನ ಕಟ್ಟಡ ಕುಸಿದ ಪರಿಣಾಮ....
ಬೆಂಗಳೂರು: ಬೆಂಗಳೂರಿನ ಈಜಿಪುರದ ಗುಂಡಪ್ಪ ಲೇಔಟ್‌ನಲ್ಲಿ ಸಿಲಿಂಡರ್ ಸ್ಫೋಟದಿಂದಾಗಿ ಎರಡು ಅಂತಸ್ತಿನ ಕಟ್ಟಡ ಕುಸಿದ ಪರಿಣಾಮ ಅವಶೇಷಗಳಡಿ ಸಿಲುಕಿ ಕಳೆದ ಮೂರು ದಿನಗಳಿಂದ ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿದ್ದ ಐದು ವರ್ಷದ ಬಾಲಕಿ ಸಂಜನಾ ಗುರುವಾರ ಮೃತಪಟ್ಟಿದ್ದಾಳೆ.
ಸಿಲಿಂಡರ್ ಸ್ಫೋಟದಿಂದಾಗಿ ಶೇ. 60 ರಷ್ಟು ಭಾಗ ಸುಟ್ಟುಹೋಗಿದ್ದ ಸಂಜನಾಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ 4.45ರ ಸುಮಾರಿ ಸಾವನ್ನಪ್ಪಿದ್ದಾಳೆ ಎಂದು ಆಸ್ಪತ್ರೆಯ ವೈದ್ಯ ಡಾ. ರಮೇಶ್ ಅವರು ತಿಳಿಸಿದ್ದಾರೆ.
ಇತರೆ ಗಾಯಾಳುಗಳಾದ ದಿಲೀಪನ್ ಹಾಗೂ ಜಾನಕಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಸುಟ್ಟ ಗಾಯಗಳ ವಿಭಾಗದ ಮುಖ್ಯಸ್ಥ ಡಾ. ರಮೇಶ್ ಹೇಳಿದ್ದಾರೆ.
ಕಟ್ಟಡ ಕುಸಿದು ಗರ್ಭಿಣಿ ಸೇರಿದಂತೆ ಏಳು ಜನ ಮೃತಪಟ್ಟಿದ್ದರು, ಅವಶೇಷಗಳಡಿಯಲ್ಲಿ ಸಿಕ್ಕಿದ್ದ ಐದು ವರ್ಷದ ಸಂಜನಾಳಿಗೆ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಈ ಮಗುವಿನ ಪೋಷಕರು ಕೂಡ ದುರಂತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.