ಬೆಂಗಳೂರು: ತೀವ್ರ ಜ್ವರ ಹಾಗೂ ರಕ್ತದೊತ್ತಡದಿಂದ ಬಳಲುತ್ತಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಬುಧವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಯಡಿಯೂರಪ್ಪ ಅವರು ನಿನ್ನೆ ರಾತ್ರಿ ಬನ್ನೇರುಘಟ್ಟ ರಸ್ತೆಯ ಸಾಗರ್ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಜ್ವರ ಹೆಚ್ಚಾಗಿದ್ದು, ರಕ್ತದೊತ್ತಡದಲ್ಲೂ ಏರುಪೇರಾಗಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ನೀಡಲಾಗಿದೆ. ಈವರೆಗಿನ ಚಿಕಿತ್ಸೆಯಿಂದ ಯಡಿಯೂರಪ್ಪ ಅವರ ಆರೋಗ್ಯ ಸುಧಾರಿಸಿದೆ ಎಂದು ಮೂಲಗಳು ತಿಳಿಸಿವೆ.