ಸಾಂದರ್ಭಿಕ ಚಿತ್ರ 
ರಾಜ್ಯ

ರಾಮನಗರ: ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು, ಮೂವರ ಸಾವು

ರಾಮನಗರ ತಾಲ್ಲೂಕಿನ ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯ ಮನಗನಹಳ್ಳಿ ಗ್ರಾಮದ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ....

ರಾಮನಗರ: ರಾಮನಗರ ತಾಲ್ಲೂಕಿನ ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯ ಮನಗಾನಹಳ್ಳಿ ಗ್ರಾಮದ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಕೆರೆಗೆ ಬಿದ್ದು ಚಾಲಕ, ಇಬ್ಬರು ಮಕ್ಕಳು ಸೇರಿದಂತೆ ಮೂವರು ಮೃತಪಟ್ಟಿರುವ ಘಟನೆ ನಿನ್ನೆ ಸಂಜೆ ನಡೆದಿದೆ.
ಮೃತರು ಕನಕಪುರ ತಾಲ್ಲೂಕಿನ ಗೊಟ್ಟಿಗೆಹಳ್ಳಿ ಗ್ರಾಮದವರು. ಚಾಲಕ ಚಿದಾನಂದ್ ಆತನ ಅಕ್ಕನ ಮಕ್ಕಳಾದ ಇಂಪನಾ ಮತ್ತು ಶಶಾಂಕ್ ಮೃತಪಟ್ಟಿದ್ದು, ಹೈಸ್ಕೂಲ್ ವಿದ್ಯಾರ್ಥಿ ದಿಲೀಪ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ದೀಪಾವಳಿ ಹಬ್ಬಕ್ಕೆಂದು ಸಂಬಂಧಿಕರ ಮನೆಗೆ ಇವರು ಹೊರಟಿದ್ದರು. 
ಅಪಘಾತದಲ್ಲಿ ನೀರಿನಲ್ಲಿ ಮುಳುಗುತ್ತಿದ್ದ ಕಾರನ್ನು ಗಮನಿಸಿದ ಗ್ರಾಮಸ್ಥರು ಕಾರಿನಲ್ಲಿದ್ದವರನ್ನು ಬೇರೆ ವಾಹನಗಳಲ್ಲಿ ರಾಜರಾಜೇಶ್ವರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯದಲ್ಲಿ ಮೃತಪಟ್ಟರು ಎಂದು ತಿಳಿದು ಬಂದಿದೆ.
ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?