ತುಮಕೂರು: ಚೀಟಿ ವ್ಯವಹಾರದಲ್ಲಿ ನೂರಾರು ಜನರಿಗೆ ವಂಚಿಸಿದ್ದ ದಂಪತಿಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರಿನ ಕೊರಟಗೆರೆ ಪಟ್ಟಣದಲ್ಲಿ ನಡೆದಿದೆ.
ರವಿ (48), ಪ್ರಭಾವತಿ (44) ಆತ್ಮಹತ್ಯೆಗೆ ಶರಣಾಗಿರುವ ದಂಪತಿಗಳಾಗಿದ್ದಾರೆ. ವಿಷ ಕುಡಿದಿರುವ ಪ್ರಭಾವತಿಯವರು ಕೊಠಡಿಯಲ್ಲಿ ಸಾವನ್ನಪ್ಪಿದ್ದಾರೆ, ರವಿಯವರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
ರವಿ ಹಾಗೂ ಪ್ರಭಾ ಅವರು ಚೀಟಿ ವ್ಯವಹಾರ ನಡೆಸುತ್ತಿದ್ದರು. ಜನರಿಗೆ ಹಣ ನೀಡದೆ ಐಷಾರಾಮಿ ಜೀವನವನ್ನು ನಡೆಸುತ್ತಿದ್ದರು. ಇದರಿಂದ ಮೋಸ ಜನರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದರಂತೆ ಜನರಿಗೆ ವಂಚನೆ ಮಾಡಿದ ಆರೋಪ ಮೇರೆಗೆ ದಂಪತಿಗಳಿಬ್ಬರನ್ನು ಜೈಲಿಗೆ ಹೋಗಿದ್ದರು. ಬಳಿಕ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು.
ಇದೀಗ ಜನರಿಗೆ ಹಣವನ್ನು ಹಿಂತಿರುಗಿಸಲು ಸಾಧ್ಯವಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ.