ಬೆಂಗಳೂರು: ನಗರದ ಪ್ರತಿಷ್ಠಿತ ಆಸ್ಪತ್ರೆಯ ಮಹಿಳಾ ಸಿಬ್ಬಂದಿ ಮೇಲೆ ಹೌಸ್ ಕೀಪಿಂಗ್ ಮ್ಯಾನೇಜರ್ ಅತ್ಯಾಚಾರ ಎಸಗಿದ್ದು ಈ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಅಕ್ಟೋಬರ್ 15ರಂದು ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಹೌಸ್ ಕೀಪಿಂಗ್ ಸೂಪರ ವೈಯರ್ ಆಗಿದ್ದ ರಾಮಾಂಜಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಮಹಿಳಾ ಸಿಬ್ಬಂದಿಯನ್ನು ಬಾತ್ ರೂಂ ಕ್ಲೀನ್ ಮಾಡುವಂತೆ ಆರೋಪಿ ಆಸ್ಪತ್ರೆಯ 7ನೇ ಮಹಡಿಗೆ ಕಳುಹಿಸಿದ್ದಾನೆ. ನಂತರ ಅಲ್ಲಿಗೆ ತೆರಳಿದ ಆತ ಬಾಗಿಲು ಲಾಕ್ ಮಾಡಿ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಇನ್ನು ಪ್ರತಿರೋಧ ತೋರಿದ್ದಕ್ಕೆ ವಿಷಯ ಬಹಿರಂಗಪಡಿಸುವುದಾಗಿ ಆರೋಪಿ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತ ಮಹಿಳೆ ಆರೋಪಿಸಿದ್ದಾಳೆ.
ಘಟನೆ ನಂತರ ಸಂತ್ರಸ್ತ ಮಹಿಳೆ ಮನೆಗೆ ತೆರಳಿ ಪತಿಗೆ ಅತ್ಯಾಚಾರದ ಬಗ್ಗೆ ಮಾಹಿತಿ ನೀಡಿದ್ದಳು. ಈ ಬಗ್ಗೆ ಎಸ್ಆರ್ ನಗರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಆರೋಪಿಯನ್ನು ಬಂಧಿಸಿರುವ ಪೊಲೀಸರು ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.