ಬೆಂಗಳೂರು: ಕುಖ್ಯಾತ ರೌಡಿ ಶೀಟರ್ ರಾಜುದೊರೆ ಬಂಧನ
ಬೆಂಗಳೂರು: ಬೆಂಗಳೂರಿನ ಸೋಲದೇವನಹಳ್ಳಿ ಆಚಾರ್ಯ ಕಾಲೇಜ್ ಬಳಿ ಇಂದು ಬೆಳಗ್ಗೆ ಕುಖ್ಯಾತ ರೌಡಿ ಶೀಟರ್ ರಾಜುದೊರೆ ಯನ್ನು ಪೋಲೀಸರು ಬಂಧಿಸಿದ್ದಾರೆ.
ಇದಕ್ಕೂ ಮುನ್ನ ರಾಜುದೊರೆ ಪೋಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಮುಖ್ಯ ಪೇದೆ ನರಸಿಂಹಮೂರ್ತಿ ಎನ್ನುವವರಿಗೆ ಡ್ರ್ಯಾಗರ್‌ನಿಂದ ಇರಿದಿದ್ದಾನೆ. ಈ ಸಮಯದಲ್ಲಿ ಆತ್ಮರಕ್ಷಣೆಗೆ ಇನ್ಸ್‌ಪೆಕ್ಟರ್ ಪ್ರಕಾಶ್ ರಾಥೋಡ್ ಫೈರಿಂಗ್ ನಡೆಸಿದರು.ರಾಜುದೊರೆಯ ಎಡಗಾಲಿಗೆ ಗುಂಡು ತಗುಲಿದೆ.
ಗುಂಡೇಟು ತಿಂದ ರಾಜುದೊರೆಯನ್ನು ವಶಕ್ಕೆ ಪಡೆದ ಪೋಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಹಲ್ಲೆಗೊಳಗಾದ ಮುಖ್ಯ ಪೇದೆ ನರಸಿಂಹ ಮೂರ್ತಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
ರೌಡಿಶೀಟರ್ ಪಳನಿಯ ಸಹಚರನಾಗಿದ್ದ ರಾಜದೊರೆ 18 ಪ್ರಕರಣಗಳಲ್ಲಿ ಆರೋಪಿಯಾಗಿ ಗುರುತಿಸಿಕೊಂಡಿದ್ದನು.