ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಹೊಸಕೋಟೆಗೆ ಕಾವೇರಿ ನೀರು ಪೂರೈಕೆಗೆ ಸರ್ಕಾರ ಚಿಂತನೆ

ಹೊಸಕೋಟೆಗೆ ಕಾವೇರಿ ನೀರನ್ನು ಸರಬರಾಜು ಮಾಡಲು ಸಾಧ್ಯತೆಗಳನ್ನು ಕಂಡುಹಿಡಿಯುವಂತೆ ರಾಜ್ಯ ಸರ್ಕಾರ ಬೆಂಗಳೂರು ....

ಬೆಂಗಳೂರು: ಹೊಸಕೋಟೆಗೆ ಕಾವೇರಿ ನೀರನ್ನು ಸರಬರಾಜು ಮಾಡಲು ಸಾಧ್ಯತೆಗಳನ್ನು ಕಂಡುಹಿಡಿಯುವಂತೆ ರಾಜ್ಯ ಸರ್ಕಾರ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಗೆ ಸೂಚಿಸಿದೆ.ಯೋಜನೆಗೆ 42 ಕೋಟಿ ರೂಪಾಯಿ ಹಣವನ್ನು ನೀಡಲು ಕೂಡ ಸರ್ಕಾರ ಮುಂದಾಗಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಬಿಡಬ್ಯ್ಲುಎಸ್ಎಸ್ಬಿ 570 ಚದರ ಕಿಲೋ ಮೀಟರ್ ದೂರದವರೆಗೆ ಕಾವೇರಿ ನೀರನ್ನು ಸರಬರಾಜು ಮಾಡುತ್ತಿದ್ದು ಹೊಸ ಬಿಬಿಎಂಪಿ ವಲಯಗಳಿಗೆ ಕಾವೇರಿ ನೀರು ಪೂರೈಕೆ ಯೋಜನೆಯ 5ನೇ ಹಂತ ಕಾರ್ಯಾರಂಭ ಮಾಡಲು ಆರಂಭವಾದಾಗ ಇನ್ನಷ್ಟು ಪ್ರದೇಶಗಳಿಗೆ ಕಾವೇರಿ ನೀರು ಪೂರೈಕೆಯಾಗಲಿದೆ.
ಸರ್ಕಾರದಿಂದ ಬಂದಿರುವ ಮನವಿ ಬಗ್ಗೆ ಜಲಮಂಡಳಿಯ ಉನ್ನತ ಅಧಿಕಾರಿಯೊಬ್ಬರು ದೃಢಪಡಿಸಿದ್ದು, ಜಲಮಂಡಳಿ ಈ ಕುರಿತು ಸಾಧ್ಯತಾ ವರದಿಯನ್ನು ಸಿದ್ದಪಡಿಸಲಿದೆ. ಪ್ರಸ್ತುತ ಹೂಡಿಯವರೆಗೆ ಬಿಡಬ್ಲ್ಯುಎಸ್ಎಸ್ ಬಿ ಕಾವೇರಿ ನೀರನ್ನು ಸರಬರಾಜು ಮಾಡುತ್ತಿದೆ. ಇನ್ನು ಹೆಚ್ಚುವರಿ 18 ಕಿಲೋ ಮೀಟರ್ ವರೆಗೆ ನೀರು ಪೂರೈಕೆ ಮಾಡಲು ಜಲಮಂಡಳಿಗೆ ಪೈಪ್ ಲೈನ್ ಹಾಕಬೇಕಾಗಿದೆ. ಹೊಸಕೋಟೆಯಲ್ಲಿ ಸುಮಾರು 1.5 ಲಕ್ಷ ಜನರು ವಾಸಿಸುತ್ತಿದ್ದಾರೆ.
 ಅವರಿಗೆ ಕಾವೇರಿ ನೀರು ಪೂರೈಸಲು ಹೆಚ್ಚುವರಿ 15 ದಶಲಕ್ಷ ಲೀಟರ್ ಹೆಚ್ಚುವರಿ ನೀರು ಪ್ರತಿದಿನ ಬೇಕಾಗಿದೆ ಎಂದು ವಿವರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!