ಅಳಂದ: ಹೂತಿದ್ದ ಶವ ಹೊರಗೆಳೆದು ಚಿನ್ನಾಭರಣ ಕಳವು 
ರಾಜ್ಯ

ಅಳಂದ: ಹೂತಿದ್ದ ಶವ ಹೊರಗೆಳೆದು ಚಿನ್ನಾಭರಣ ಕಳವು

ಕಲ್ಬುರ್ಗಿ ಜಿಲ್ಲೆ ಆಳಂದ ತಾಲ್ಲೂಕು ಖಜೂರಿ ಗ್ರಾಮದಲ್ಲಿ ಹೂತ ಶವ ಹೊರ ತೆಗೆದು ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ವರದಿಯಾಗಿದೆ.

ಅಳಂದ( ಕಲ್ಬುರ್ಗಿ): ಕಲ್ಬುರ್ಗಿ ಜಿಲ್ಲೆ ಆಳಂದ ತಾಲ್ಲೂಕು ಖಜೂರಿ ಗ್ರಾಮದಲ್ಲಿ ಹೂತ ಶವ ಹೊರ ತೆಗೆದು  ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ವರದಿಯಾಗಿದೆ.
ಪ್ರೇಮಾಬಾಯಿ ಡಗೆ (75) ಐದು ದಿನಗಳ ಹಿಂದೆ ಅನಾರೋಗ್ಯದಿಂದ ಮೃತಪಟ್ಟಿದ್ದರು. ಮಕ್ಕಳಿರದ ಹಿನ್ನಲೆಯಲ್ಲಿ ಗ್ರಾಮಸ್ಥರೇ ಶವಸಂಸ್ಕಾರ ನಡೆಸಿದ್ದರು. ಮಹಿಳೆಯ ಮೈಮೇಲಿನ ಚಿನ್ನದ ಒಡವೆ ಸಮೇತ ಅಂತ್ಯಕ್ರಿಯೆ ನೆರವೇರಿಸಲಾಗಿತ್ತು. 
ನಿನ್ನೆ  ರಾತ್ರಿ ಸಮಾಧಿಯಿಂದ ಶವವನ್ನು ಹೊರತೆಗೆದ ಕಳ್ಳರು ಶವದ ಮೈಮೇಲಿನ 50ಗ್ರಾಂ ಗೂ ಅಧಿಕ  ಚಿನ್ನಾಭರಣಗಳನ್ನು ದೋಚಿದ್ದಾರೆ.  ಆಭರಣ ಕದ್ದ ದರೋಡೆಕೋರರು ಶವವನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ.
ಇಂದು ಬೆಳಗ್ಗೆ ಸಮಾಧಿಯಿಂದ ಹೊರಗಿದ್ದ ಶವ ನೋಡಿ ಕುಟುಂಬಿಕರು, ಗ್ರಾಮಸ್ಥರು ಕಂಗಾಲಾಗಿದ್ದು ಪೋಲೀಸರಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಅಲಂದ ಪೋಲೀಸರು ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT