ಜಂಟಿ ಸದನ ಉದ್ದೇಶಿಸಿ ಮಾತನಾಡುತ್ತಿರುವ ರಾಷ್ಟ್ರಪತಿ ಕೋವಿಂದ್ 
ರಾಜ್ಯ

ಟಿ‌ಪ್ಪು ಅಪ್ರತಿಮ ವೀರ, ಬ್ರಿಟಿಷರ ವಿರುದ್ದ ಹೋರಾಡಿ ವೀರಮರಣ ಹೊಂದಿದ: ರಾಷ್ಟ್ರಪತಿ ಕೋವಿಂದ್

ಒಂದೆಡೆ ಸಿದ್ದರಾಮಯ್ಯ ಸರ್ಕಾರದ ಟಿಪ್ಪು ಜಯಂತಿ ಆಚರಣೆಗೆ ಬಿಜೆಪಿ ಪಕ್ಷ ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಈ ಹಿಂದೆ ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮೈಸೂರು ಹುಲಿ ಟಿಪ್ಪು ಸುಲ್ತಾನ್ ರನ್ನು ಕೊಂಡಾಡಿದ್ದಾರೆ.

ಬೆಂಗಳೂರು: ಒಂದೆಡೆ ಸಿದ್ದರಾಮಯ್ಯ ಸರ್ಕಾರದ ಟಿಪ್ಪು ಜಯಂತಿ ಆಚರಣೆಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಈ ಹಿಂದೆ ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ರಾಷ್ಟ್ರಪತಿ ರಾಮನಾಥ್ ಕೋವಿಂದ್  ಅವರು ಮೈಸೂರು ಹುಲಿ ಟಿಪ್ಪು ಸುಲ್ತಾನ್ ರನ್ನು ಕೊಂಡಾಡಿದ್ದಾರೆ.
ಇಂದು ವಿಧಾನಸೌಧದ ವಜ್ರ ಮಹೋತ್ಸವ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡಿದ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು, ರಾಜ್ಯದ ಇತಿಹಾಸವನ್ನು ಮೆಲುಕು ಹಾಕಿದರು. ಸೇನೆಯಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡಿದ್ದ ಟಿಪ್ಪು ಸುಲ್ತಾನ್ ಒಬ್ಬ ಅಪ್ರತಿಮ ವೀರನಾಗಿದ್ದ. ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿ ವೀರಮರಣ ಹೊಂದಿದ ಎಂದು ಕೊಂಡಾಡಿದರು. 
ಟಿಪ್ಪು ಸುಲ್ತಾನ್ ಯುದ್ಧಭೂಮಿಯಲ್ಲಿ ಮೈಸೂರು ರಾಕೆಟ್ ಬಳಸಿದ ಅಪ್ರತಿಮ ನಾಯಕ. ಟಿಪ್ಪು ರೂಪಿಸಿದ್ದ ರಾಕೆಟ್ ತಂತ್ರಜ್ಞಾನವನ್ನು ಯುರೋಪಿಯನ್ನರು ನಂತರ ಬಳಸಿಕೊಂಡರು ಎಂದು ರಾಷ್ಟ್ರಪತಿಗಳು ಹೇಳಿದರು.
ಕರ್ನಾಟಕ ವೀರ ಯೋಧರ ಭೂಮಿಯಾಗಿದ್ದು, ರಾಣಿ ಅಬ್ಬಕ್ಕ, ವಿಜಯನಗರದ ಅರಸರು, ಕಿತ್ತೂರು ರಾಣಿ ಚೆನ್ನಮ್ಮ, ಕೇಂಪೇಗೌಡ ಅವರು ಇಲ್ಲಿ ರಾಜ್ಯವನ್ನಾಳಿದ್ದಾರೆ. ಅಂತೆಯೇ ಮೈಸೂರನ್ನು ಆಳಿದ್ದ ಟಿಪ್ಪು ಸುಲ್ತಾನ್ ಅಪ್ರತಿಮ  ವೀರ ಯೋಧನಾಗಿದ್ದ. ರಾಕೆಟ್ ತಂತ್ರಜ್ಞಾನದ ಜನಕನಾಗಿದ್ದ ಟಿಪ್ಪು ಎಂದು ಕೋವಿಂದ್ ಕೊಂಡಾಡಿದ್ದಾರೆ.
ಅತ್ತ ಕೋವಿಂದ್ ಅವರ ಬಾಯಲ್ಲಿ ಟಿಪ್ಪು ಸುಲ್ತಾನ್ ಹೆಸರು ಕೇಳುತ್ತಿದ್ದಂತೆಯೇ ಕಾಂಗ್ರೆಸ್ ಶಾಸಕರು ಮೇಜು ತಟ್ಟಿ ತಮ್ಮ ಹರ್ಷ ವ್ಯಕ್ತಪಡಿಸಿದರೆ, ಇತ್ತ ಸದನದಲ್ಲಿದ್ದ ಬಿಜೆಪಿ ಸದಸ್ಯರು ಪೇಚು ಮೊರೆ ಹಾಕಿಕೊಂಡಿರುವುದು ಕಂಡುಬಂತು. ಕೋವಿಂದ್ ಅವರ ಈ ಭಾಷಣ ಇದೀಗ ಟಿಪ್ಪು ಜಯಂತಿ ವಿರೋಧಿಸುತ್ತಿರುವ ಬಿಜೆಪಿ ಪಕ್ಷದ ಮುಖಂಡರಿಗೆ ಮುಜುಗರವನ್ನುಂಟು ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!