ರಾಜ್ಯ

ನಕಲಿ ಛಾಪಾ ಕಾಗದ ಪ್ರಕರಣ ಅಪರಾಧಿ ಅಬ್ದುಲ್ ಕರೀಂಲಾಲ್ ತೆಲಗಿ ನಿಧನ

Vishwanath S
ಬೆಂಗಳೂರು: ನಕಲಿ ಛಾಪಾ ಕಾಗದ ಹಗರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಬ್ದುಲ್ ಕರೀಂ ಲಾಲ್ ತೆಲಗಿ ಮೃತಪಟ್ಟಿದ್ದಾರೆ. 
56 ವರ್ಷದ ತೆಲಗಿ ಸಕ್ಕರೆ ಕಾಯಿಲೆ, ಬಿಪಿ ಮತ್ತು ಇತರೆ ಬಹು ಅಂಗಾಂಗ ವೈಫಲ್ಯದಿಂದಾಗಿ ಬಳಲುತ್ತಿದ್ದು ಸೋಮವಾರ ರಾತ್ರಿಯೇ ಆರೋಗ್ಯ ಗಂಭೀರವಾಗಿತ್ತು. ಹೀಗಾಗಿ ರಾತ್ರಿ 8 ಗಂಟೆ ಸುಮಾರಿನಲ್ಲಿ ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ತೆಲಗಿಗೆ ಪ್ರಸ್ತುತ ಐಸಿಯು ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಕೃತಕ ಉಸಿರಾಟ (ವೆಂಟಿಲೇಟರ್) ಮೂಲಕ ತುರ್ತು ಚಿಕಿತ್ಸೆ ನೀಡಲಾಗುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ. 
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಅಬ್ದುಲ್ ಕರೀಂ ಲಾಲ ತೆಲಗಿ ಅವರಿಗೆ ಅನಾರೋಗ್ಯದ ಕಾರಣ ಅಕ್ಟೋಬರ್ 16 ರಂದು ನಗರದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತಿತ್ತು.  
ಅಬ್ದುಲ್ ಕರೀಂ ಲಾಲ್ ತೆಲಗಿ ಬಹುಕೋಟಿ ಛಾಪಾ ಕಾಗದ ಹಗರಣದ ಪ್ರಕರಣದಲ್ಲಿ 2002 ರಿಂದ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದು, ಅವರಿಗೆ ಮಧುಮೇಹ, ಬಿಪಿ, ಉಸಿರಾಟಗ ತೊಂದರೆ ಸೇರಿದಂತೆ ಇನ್ನಿತರೆ ಕಾಯಿಲೆಗಳಿಂದ ಬಳಲುತ್ತಿದ್ದರು. 
SCROLL FOR NEXT