ಉಡುಪಿ: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ, ಯುವಕನ ಬಂಧನ
ಮದುವೆಯಾಗುವುದಾಗಿ ನಂಬಿಸಿ ಯುವತಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಓರ್ವ ಯುವಕನನ್ನು ಉಡುಪಿ ಜಿಲ್ಲೆ ಕುಂದಾಪುರದ ಕೋಟ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಉಡುಪಿ: ಮದುವೆಯಾಗುವುದಾಗಿ ನಂಬಿಸಿ ಯುವತಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಓರ್ವ ಯುವಕನನ್ನು ಉಡುಪಿ ಜಿಲ್ಲೆ ಕುಂದಾಪುರದ ಕೋಟ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಸಾಸ್ತಾನ ಗ್ರಾಮದ ಸೊಹೈಲ್ ಮಹಮ್ಮದ್ ಅಲಿ ಎಂದು ಗುರುತಿಸಲಾಗಿದೆ. ಸೊಹೈಲ್ ಸ್ಥಳೀಯ ಕಾಲೇಜಿನಲ್ಲಿ ಒದುತಿದ್ದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ತಾನು ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿದ್ದ. ಇದಕ್ಕೆ ಒಪ್ಪದ ಯುವತಿಗೆ ಬೆದರಿಕೆಯೊಡ್ಡಿ ಹಲವು ಬಾರಿ ಅತ್ಯಾಚಾರ ನಡೆಸಿದ್ದ ಎನ್ನಲಾಗಿದೆ.
ಅತ್ಯಾಚಾರಕ್ಕೀಡಾದ ಯುವತಿ ಗರ್ಭವತಿಯಾಗಿದ್ದು ಮಗುವಿಗೆ ಜನ್ಮ ನೀಡಿದ್ದಾಳೆ. ಆದರೆ ಅತ್ಯಾಚಾರ ಕುರಿತು ಎಲ್ಲಿಯೂ ಹೇಳಿಕೊಳ್ಳದಂತೆ ಸೊಹೈಲ್ ಯುವತಿಗೆ ಜೀವ ಬೆದರಿಕೆ ಒಡ್ಡಿದ್ದನು. ಯುವತಿಯ ಮನೆಯವರು ಈ ವಿಚಾರವಾಗಿ ಕೋಟ ಪೋಲೀಸರಿಗೆ ದೂರು ಸಲ್ಲಿಸಿದ್ದಾರೆ. ಅದಾಗ ಪರಾರಿಯಾಗಲು ಯತ್ನಿಸಿದ ಸೊಹೈಲ್ ನನ್ನು ಪೋಲೀಸರು ಬಂಧಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.