ವಿಜಯಪುರ: ರೆಫ್ರಿಜರೇಟರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಬಾಲಕರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಶನಿವಾರ ವಿಜಯಪುರ ತಾಲೂಕಿನ ಉತ್ನಾಳ ಗ್ರಾಮದ ನಡೆದಿದೆ.
ಗ್ರಾಮದ ಹೊರವಲಯದಲ್ಲಿರುವ ತೋಟದ ಮನೆಯಲ್ಲಿ ಇಂದು ಈ ಘಟನೆ ಸಂಭವಿಸಿದ್ದು, ಮೃತಪಟ್ಟ ಬಾಲಕರನ್ನು ಸಂಜೀವ ಕುಮಾರ್ ಹೂಗಾರ(11) ಹಾಗೂ ಪವನ ಪ್ರಕಾಶ ಹೂಗಾರ(5) ಎಂದು ಗುರುತಿಸಲಾಗಿದೆ.
ಫ್ರಿಡ್ಜ್ ನಲ್ಲಿನ ಗ್ಯಾಸ್ ಲೀಕ್ ಆದ ಪರಿಣಾಮ ಈ ಸ್ಫೋಟ ಸಂಭವಿಸಿದೆ. ಫ್ರಿಡ್ಜ್ ಬ್ಲಾಸ್ಟ್ ನಿಂದ ಬಾಲಕರ ದೇಹಗಳು ಛಿದ್ರ ಛಿದ್ರವಾಗಿವೆ.
ಸ್ಥಳಕ್ಕೆ ವಿಜಯಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.