ಚಾಮುಂಡಿ ದೇಗುಲಕ್ಕೆ ಚಿನ್ನದ ಬಾಗಿಲು 
ರಾಜ್ಯ

ನಾಡ ಅಧಿದೇವತೆ ಚಾಮುಂಡೇಶ್ವರಿ ದೇಗುಲಕ್ಕೆ ಚಿನ್ನದ ಬಾಗಿಲು ಸಮರ್ಪಣೆ!

ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿಗೆ ಸಚಿವ ಡಿಕೆ ಶಿವಕುಮಾರ್ ಅವರು ಬೆಳ್ಳೆ ಆನೆ ಸಮರ್ಪಿಸಿದ ಬೆನ್ನಲ್ಲೇ ಇದೀಗ ವ್ಯಕ್ತಿಯೊಬ್ಬರು ದೇಗುಲಕ್ಕೆ ಕೋಟ್ಯಂತರ ಮೌಲ್ಯದ ಚಿನ್ನದ ಬಾಗಿಲನ್ನು ಸಮರ್ಪಣೆ ಮಾಡಿದ್ದಾರೆ.

ಮೈಸೂರು: ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿಗೆ ಸಚಿವ ಡಿಕೆ ಶಿವಕುಮಾರ್ ಅವರು ಬೆಳ್ಳೆ ಆನೆ ಸಮರ್ಪಿಸಿದ ಬೆನ್ನಲ್ಲೇ ಇದೀಗ ವ್ಯಕ್ತಿಯೊಬ್ಬರು ದೇಗುಲಕ್ಕೆ ಕೋಟ್ಯಂತರ ಮೌಲ್ಯದ ಚಿನ್ನದ ಬಾಗಿಲನ್ನು ಸಮರ್ಪಣೆ  ಮಾಡಿದ್ದಾರೆ.
ಮಾಧ್ಯಮಗಳು ವರದಿ ಮಾಡಿರುವಂತೆ ಬೆಂಗಳೂರು ಮೂಲದ ವಕೀಲ ಜಯಶ್ರೀ ಶ್ರೀಧರ್ ಎಂಬುವವರು ಮೈಸೂರಿನ ಚಾಮುಂಡೇಶ್ವರಿ ದೇಗುಲಕ್ಕೆ ಸುಮಾರು 4 ಕೆಜಿ ತೂಕದ ಚಿನ್ನದ ಬಾಗಿಲನ್ನು ಸರ್ಮರ್ಪಿಸಿದ್ದಾರೆ. ಗರ್ಭಗುಡಿ  ಬಾಗಿಲಿಗೆ ಚಿನ್ನದ ಪಟ್ಟಿ ಬಾಗಿಲು ಅರ್ಪಿಸುವುದಾಗಿ ಈ ಹಿಂದೆ ಜಯಶ್ರೀ ಶ್ರೀಧರ್ ಅವರು ಹರಕೆ ಹೊತ್ತಿದ್ದರಂತೆ. ಅದರಂತೆ 2 ವರ್ಷಗಳ ಹಿಂದೆ ದೇಗುಲದ ಆಡಳಿತ ಮಂಡಳಿಯೊಂದಿಗೆ ಈ ಬಗ್ಗೆ ಚರ್ಚಿಸಿ, ಆಡಳಿತ ಮಂಡಳಿಯಿಂದ  ಒಪ್ಪಿಗೆ ಪಡೆದು ಇದೀಗ ತಮ್ಮ ಹರಕೆ ತೀರಿಸಿದ್ದಾರೆ.
ಈ ಚಿನ್ನದ ಬಾಗಿಲು ಸುಮಾರು 4 ಕೆಜಿ ತೂಕವಿದ್ದು, ಬಾಗಿಲಿನ ಮೇಲೆ ನವದುರ್ಗೆಯರಿರುವ ಚಿತ್ರಗಳನ್ನು ಚಿತ್ರಿಸಲಾಗಿದೆ.  ಈ ಹಿಂದೆ ಬಾಗಿಲಿನ ಮೇಲೆ ಬೆಳ್ಳಿಯ ಪಟ್ಟಿ ಹಾಕಲಾಗಿತ್ತು. ಇದೀಗ ಮತ್ತೆ ಅದೇ ಬೆಳ್ಳಿ ಪಟ್ಟಿಯ ಮೇಲೆ  ಚಿನ್ನದ ಪಟ್ಟಿಯನ್ನು ಕೂರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!