ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜ್ಯ

ಕೇಂದ್ರ ಸರ್ಕಾರ ರಾಜ್ಯಕ್ಕೆ ಕಲ್ಲಿದ್ದಲು ಅನ್ಯಾಯ ಮಾಡುತ್ತಿದೆ: ಮುಖಮಂತ್ರಿ ಸಿದ್ದರಾಮಯ್ಯ

ವಿದ್ಯುತ್ ಉತ್ಪಾದನೆಗೆ ಕಲ್ಲಿದ್ದಲು ಸರಬರಾಜು ಮಾಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದ್ದು, ಬಿಜೆಪಿಯೇತರ ಸರ್ಕಾರವಿರುವ ರಾಜ್ಯಗಳಿಗೆ ಸಮರ್ಪಕವಾಗಿ ಕಲ್ಲಿದ್ದಲು ಪೂರೈಕೆ ಮಾಡುತ್ತಿಲ್ಲ. ಹೀಗಾಗಿ ರಾಜ್ಯ ಸರ್ಕಾರಕ್ಕೆ ಸಮಸ್ಯೆಯಾಗಿದೆ...

ಬೆಂಗಳೂರು: ವಿದ್ಯುತ್ ಉತ್ಪಾದನೆಗೆ ಕಲ್ಲಿದ್ದಲು ಸರಬರಾಜು ಮಾಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದ್ದು, ಬಿಜೆಪಿಯೇತರ ಸರ್ಕಾರವಿರುವ ರಾಜ್ಯಗಳಿಗೆ ಸಮರ್ಪಕವಾಗಿ ಕಲ್ಲಿದ್ದಲು ಪೂರೈಕೆ ಮಾಡುತ್ತಿಲ್ಲ. ಹೀಗಾಗಿ ರಾಜ್ಯ ಸರ್ಕಾರಕ್ಕೆ ಸಮಸ್ಯೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಆರೋಪಿಸಿದ್ದಾರೆ. 
ಇಂಧನ ಇಲಾಖೆ ನಗರದ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ 'ಪವರ್ ಅವಾರ್ಡ್ಸ್' ಪ್ರದಾನ ಕಾರ್ಯಕ್ರಮದಲ್ಲಿ ವಿದ್ಯುತ್ ಉತ್ಪಾದನಾ ಕ್ಷೇತ್ರದಲ್ಲಿ ಸಾಧನೆ ಮಾಡಿದ 217 ಮಂದಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿರುವ ಅವರು, ಕೇಂದ್ರ ಸರ್ಕಾರವು ಬಿಜೆಪಿ ಸರ್ಕಾರ ಇರುವ ರಾಜ್ಯಗಳು ಮತ್ತು ಬಿಜೆಪಿಯೇತರ ಸರ್ಕಾರವಿರುವ ರಾಜ್ಯಗಳಿಗೆ ಕಲ್ಲಿದ್ದಲು ಪೂರೈಕೆಯಲ್ಲಿಭಾರಿ ತಾರತಮ್ಯ ಮಾಡುತ್ತಿದೆ ಎಂದು ಹೇಳಿದ್ದಾರೆ. 
ಕೇಂದ್ರ ಸರ್ಕಾರದ ಈ ತಾರತಮ್ಯದಿಂದಾಗಿ ರಾಜ್ಯದಲ್ಲಿ ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಸಮರ್ಪಕವಾಗಿ ನಡೆಯುತ್ತಿಲ್ಲ. ರಾಜ್ಯದಲ್ಲಿ ಕಲ್ಲಿದ್ದಲು ಕೊರತೆಯಿಂದಾಗಿ ಕೇವಲ ಎರಡು ದಿನಗಳಿಗೆ ಆಗುವಷ್ಟು ಮಾತ್ರ ಕಲ್ಲಿದ್ದಲು ಸಂಗ್ರಹವಿದೆ. ಹೀಗಾಗಿ ಕೇವಲ 2500 ಮೆ.ವ್ಯಾಟ್ ವಿದ್ಯುತ್ ಮಾತ್ರ ಉತ್ಪಾದನೆ ಮಾಡುತ್ತಿದೆ. 

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ರಾಜ್ಯದಲ್ಲಿ ಕೇವಲ 13,000 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಆಗುತ್ತಿತ್ತು. ಈ ನಾಲ್ಕೂವರೆ ವರ್ಷದಲ್ಲಿ ವಿದ್ಯುತ್ ಉತ್ಪಾದನೆ ಪ್ರಮಾಣವನ್ನು 20 ಸಾವಿರ ಮೆಗಾ ವ್ಯಾಟ್'ಗೆ ಹೆಚ್ಚಿಸಲಾಗಿದೆ. ಹಿಂದಿನ ಸರ್ಕಾರಗಳು ಹೆಚ್ಚು ವಿದ್ಯುತ್ ಉತ್ಪಾದಿಸುವ ಕಾರಣ ರಾಜ್ಯ ಕತ್ತಲಲ್ಲಿ ಕಾಲ ಕಳೆಯುವಂತಾಗಿತ್ತು. 

ನಮ್ಮ ಸರ್ಕಾರ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನಲ್ಲಿ 13,000 ಎಕರೆ ಪ್ರದೇಶದಲ್ಲಿ 2,000 ಮೆಗಾ ವ್ಯಾಟ್ ಸಾಮರ್ಥ್ಯದ ಸೌರಶಕ್ತಿ ಉತ್ಪಾದಿಸುವ ವಿಶ್ವದ ಅತಿದೊಡ್ಡ ಸೋಲಾರ್ ಪಾರ್ಕ್ ಸ್ಥಾಪಿಸಿದೆ. ಈ ಸಾಧನೆ ಮಾಡಿರುವುದಕ್ಕೆ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಮತ್ತು ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದ್ದಾರೆ. 
ಕಲ್ಲಿದ್ದಲಿಗೆ ಸಂಬಂಧಿಸಿದಂತೆ ರಾಜ್ಯದ ಅಧಿಕಾರಿಗಳು ಕೇಂದ್ರ ಸರ್ಕಾರದ ನಾಯಕರೊಂದಿಗೆ ಮಾತುಕತೆ ನಡೆಸಿದ್ದರು. ಈ ವೇಳೆ ರಾಜ್ಯದಲ್ಲಿ ಎದುರಾಗಿರುವ ಸಮಸ್ಯೆಗಳನ್ನು ವಿವರಿಸಿ ಕಲ್ಲಿದ್ದಲು ಪೂರೈಕೆ ಮಾಡುವಂತೆ ಮನವಿ ಮಾಡಿಕೊಂಡಿದ್ದರು. ರಾಜ್ಯ ಸರ್ಕಾರದ ಮನವಿ ಬಳಿಕವೂ ಕೇಂದ್ರ ಸರ್ಕಾರ ಯಾವುದೇ ರೀತಿಯ ಪ್ರತಿಕ್ರಿಯೆಗಳನ್ನು ನೀಡಿಲ್ಲ. ಒಂದು ವೇಳೆ ಕೇಂದ್ರ ಸರ್ಕಾರ ಇದೇ ರೀತಿ ತನ್ನ ನಿಲುವನ್ನು ಮುಂದುವರೆಸಿದ್ದೇ ಆದರೆ, ಜಿಡಿಪಿ ಇಳಿಕೆಯಾಗುತ್ತದೆ. 

ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ 1.86 ಲಕ್ಷ ಉದ್ಯೋಗಾವಕಾಶಗಳನ್ನು ಸೃಷ್ಟಿಸಿದೆ. ಕಿರು, ಸಣ್ಣ ಹಾಗೂ ಮಧ್ಯಮ ಉದ್ಯಮ ಕ್ಷೇತ್ರಗಳಲ್ಲಿ 12ಲಕ್ಷ ಉದ್ಯೋಗಾವಕಾಶಗಳನ್ನು ಸೃಷ್ಟಿಸಿದೆ. ಕೌಶಲ್ಯಾಭಿವೃದ್ಧಿ ಇಲಾಖೆ ವತಿಯಿಂದ 6 ಲಕ್ಷಕ್ಕೂ ಹೆಚ್ಚು ಯುವಕರು ಕೌಶಲ್ಯ ತರಬೇತಿಗಳನ್ನು ಪಡೆದುಕೊಂಡಿದ್ದಾರೆ. ರಾಜ್ಯದಲ್ಲಿರುವ ನಿರುದ್ಯೋಗ ಸಮಸ್ಯೆಗೆ ಸರ್ಕಾರ ತೆಗೆದುಕೊಂಡಿರುವ ಕ್ರಮಗಳಿಗೆ ಇವುಗಳೇ ಸಾಕ್ಷಿ ಎಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

SIR ಅಕ್ರಮ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ