ತುಮಕೂರು: ರಸ್ತೆ ಅಪಘಾತ, ಸ್ಥಳದಲ್ಲೇ ಇಬ್ಬರ ಸಾವು
ತುಮಕೂರು: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರಿನ ಬಳಿ ಸಂಭವಿಸಿದೆ
ಶಂಕರ್ ಜೋಷಿ(31), ವೇಣುಗೋಪಾಲ್(30) ಎನ್ನುವವರಿಬ್ಬರು ಘಟನೆಯಲ್ಲಿ ಸಾವನ್ನಪ್ಪಿದ್ದು ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಮೂಲತಃ ಹಾವೇರಿ ಜಿಲ್ಲೆ ಶಿಗ್ಗಾಂವಿ ನಿವಾಸಿಗಳಾಗಿದ್ದ ಅವರು ಇಂದು ತುಮಕೂರಿನ ಸ್ನೇಹಿತರನ್ನು ಭೇಟಿ ಮಾದಲೆಂದು ಹೊರಟಿದ್ದರು.
ಎಚ್‍ಎಂಟಿ ಕಾರ್ಖಾನೆ ಹತ್ತಿರ ಬಂದಾಗ ಬೈಕ್ ನ್ನು ಸ್ಲೋ ಮಾಡಿದ ಸಂದರ್ಭ ತಮಿಳುನಾಡು ಮೂಲದ ಲಾರಿ ಒಂದು ವೇಗವಾಗಿ ಬಂದು ಹಿಂದಿನಿಂದ ಡಿಕ್ಕಿ ಹೊಡೆದಿದೆ. ಹೀಗೆ ಢಿಕ್ಕಿ ಆಗ ತಕ್ಷಣವೇ ಇಬ್ಬರೂ ಮೃತಪಟ್ಟಿದ್ದಾರೆ.
ಅಪಘಾತದ ಸ್ಥಳದಲ್ಲಿ ಟ್ರಾಫಿಕ್ ಜಾಮ್ ಉಂತಾಗಿ ರಸ್ತೆ ಸಂಚಾರ ಅಸ್ತವ್ಯಸ್ತವಾಗಿತ್ತು. ಸಂಚಾರಿ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics