ಬೆಂಗಳೂರು: ಸೆಂಟರ್ ಫಾರ್ ಸಿಲ್ಕ್ ಟೆಕ್ನಾಲಜಿ ಮತ್ತು ರಿಸರ್ಚ್ ಸಹಕಾರದೊಡನೆ ಸಾರ್ವಜನಿಕ ಸೂಚನಾ ಇಲಾಖೆಯಿಂದ ನಡೆಸಲ್ಪಟ್ಟ ಒಂದು ಗುಣಮಟ್ಟದ ಪರೀಕ್ಷೆಯಲ್ಲಿ, ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಉಚಿತವಾಗಿ ನೀಡಲಾದ ಸಮವಸ್ತ್ರಗಳು ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ತಿಳಿದು ಬಂದಿದೆ.
ಮೈಸೂರು ಮತ್ತು ಬೆಳಗಾವಿ ವಿಭಾಗಗಳಿಂದ ಈ ಕುರಿತು ಹೆಚ್ಚಿನ ದೂರುಗಳು ಬಂದಿದ್ದವು. ರಾಜ್ಯ ಸರ್ಕಾರದಡಿಯಲ್ಲಿ ಬರುವ ಕೈಮಗ್ಗ ಅಭಿವೃದ್ಧಿ ನಿಗಮ ಸಹ, ಸಮವಸ್ತ್ರವನ್ನು ಒದಗಿಸಿದೆ. "ಕೈಮಗ್ಗ ಅಭಿವೃದ್ಧಿ ನಿಗಮ ಕ್ಕೆ ಈ ಪ್ರಕರಣಕ್ಕೆ ಸಂಬಂಧಿಸಿ 20 ಲಕ್ಷ ರೂ. ದಂಡ ವಿಧಿಸಲಾಗುವುದು. ಅಷ್ಟೇ ಅಲ್ಲದೆ೩ ಹೊಸ ಸಮವಸ್ತ್ರಗಳನ್ನು ಒದಗಿಸಲು ನಾವು ಅವರನ್ನು ಕೇಳುತ್ತೇವೆ" ಎಂದು ಡಿಪಿಐ ಅಧಿಕಾರಿಯೊಬ್ಬರು ತಿಳಿಸಿದರು.