ಮೃತ ಗೌರಿ ಲಂಕೇಶ್ 
ರಾಜ್ಯ

ಗೌರಿ ಲಂಕೇಶ್ ಹತ್ಯೆ: ಸಂಸ ಬಯಲು ರಂಗಮಂದಿರದಲ್ಲಿ ಪಾರ್ಥೀವ ಶರೀರದ ಸಾರ್ವಜನಿಕ ದರ್ಶನ!

ಮಂಗಳವಾರ ರಾತ್ರಿ ಹತ್ಯೆಗೀಡಾದ ಹಿರಿಯ ಪತ್ರಕರ್ತೆ ಹಾಗೂ ವಿಚಾರವಾದಿ ಗೌರಿ ಲಂಕೇಶ್ ಅವರ ಪಾರ್ಥೀವ ಶರೀರದ ಸಾರ್ವಜನಿಕ ದರ್ಶನವನ್ನು ಸಂಸ ಬಯಲು ರಂಗಮಂದಿರದಲ್ಲಿ ಮಾಡಲಾಗುತ್ತದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

ಬೆಂಗಳೂರು: ಮಂಗಳವಾರ ರಾತ್ರಿ ಹತ್ಯೆಗೀಡಾದ ಹಿರಿಯ ಪತ್ರಕರ್ತೆ ಹಾಗೂ ವಿಚಾರವಾದಿ ಗೌರಿ ಲಂಕೇಶ್ ಅವರ ಪಾರ್ಥೀವ ಶರೀರದ ಸಾರ್ವಜನಿಕ ದರ್ಶನವನ್ನು ಸಂಸ ಬಯಲು ರಂಗಮಂದಿರದಲ್ಲಿ ಮಾಡಲಾಗುತ್ತದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.
ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಖ್ಯಾತ ನಿರ್ದೇಶಕ ಹಾಗೂ ಗೌರಿ ಲಂಕೇಶ್ ಅವರ ಸಹೋದರ ಇಂದ್ರಜಿತ್ ಲಂಕೇಶ್ ಅವರು, ಕುಟುಂಬಸ್ಥರೊಂದಿಗೆ ಚರ್ಚಿಸಲಾಗಿದ್ದು, ಗೌರಿ ಲಂಕೇಶ್ ಅವರ ಅಂತಿಮ  ವಿಧಿವಿಧಾನವನ್ನು ಚಾಮರಾಜಪೇಟೆಯಲ್ಲಿರುವ ರುದ್ರಭೂಮಿಯಲ್ಲಿ ಮಾಡಲಾಗುತ್ತದೆ. ಅಂತೆಯೇ ಮರಣೋತ್ತರ ಪರೀಕ್ಷೆ ಬಳಿಕ ಮೂರು ಗಂಟೆಗಳ ಕಾಲ ಪಾರ್ಥೀವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತದೆ.  ಇದಕ್ಕಾಗಿ ಸಂಸ ಬಯಲು ರಂಗಮಂದಿರದಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಇನ್ನು ಮೃತ ಗೌರಿ ಲಂಕೇಶ್ ಅವರ ಪಾರ್ಥೀವ ಶರೀರ ಪ್ರಸ್ತುತ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿದ್ದು, ಇನ್ನು ಕೆಲವೇ ಕ್ಷಣಗಳಲ್ಲಿ ಆಸ್ಪತ್ರೆ ವೈದ್ಯರು ಪಾರ್ಥೀವ ಶರೀರದ ಮರಣೋತ್ತರ ಪರೀಕ್ಷೆ ನಡೆಸಲಿದ್ದಾರೆ. ಬಳಿಕ  ದೇಹವನ್ನು ಕುಟುಂಬಸ್ಥರಿಗೆ ನೀಡಲಾಗುತ್ತದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT