ಈಶ್ವರಪ್ಪ 
ರಾಜ್ಯ

ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪಗೆ ಬೆದರಿಕೆ ಕರೆ: ದೂರು ದಾಖಲು

ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಅವರಿಗೆ ಕರೆ ಮಾಡಿ ವ್ಯಕ್ತಿಯೊಬ್ಬ ಜೀವ ಬೆದರಿಕೆ ಹಾಕಿದ್ದಾನೆ. ಈ ಹಿನ್ನೆಲೆಯಲ್ಲಿ ಈಶ್ವರಪ್ಪ ರಕ್ಷಣೆ ಕೋರಿ ...

ಶಿವಮೊಗ್ಗ: ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಅವರಿಗೆ ಕರೆ ಮಾಡಿ ವ್ಯಕ್ತಿಯೊಬ್ಬ ಜೀವ ಬೆದರಿಕೆ ಹಾಕಿದ್ದಾನೆ. ಈ ಹಿನ್ನೆಲೆಯಲ್ಲಿ ಈಶ್ವರಪ್ಪ ರಕ್ಷಣೆ ಕೋರಿ ದೂರು ದಾಖಲಿಸಿದ್ದಾರೆ. 
ಸೆ. 5ರಂದು ಮಧ್ಯಾಹ್ನ 2.30ಕ್ಕೆ ಕರೆ ಬಂದಿತ್ತು. ನೀನು ಮುಸ್ಲಿಂ ವಿರೋಧಿ,ಹಿಂದೂಗಳ ಪರವಾಗಿ ಹೋರಾಟ ನಡೆಸುತ್ತೀಯಾ.  ನಿನ್ನನ್ನು ಸುಮ್ಮನೆ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾನೆ.ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಇದೇ ವೇಳೆ ಆತನಿಗೆ ಪ್ರತ್ಯುತ್ತರ ನೀಡಿದ ಈಶ್ವರಪ್ಪ, ತಾಕತ್ತಿದ್ದರೇ ಫೋನ್ ಬಿಟ್ಟು ಎದುರಿಗೆ ಬಂದು ಮಾತನಾಡು ಎಂದು ಹೇಳಿದ್ದಾರೆ.
ಕರೆ ಮಾಡಿದ ವ್ಯಕ್ತಿಯನ್ನು ಪತ್ತೆ ಹಚ್ಚಿ ಬಂಧಿಸಬೇಕು. ಕಾನೂನು ಕ್ರಮ ಜರುಗಿಸಬೇಕು’ ಎಂದು ಬುಧವಾರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಭಿನವ್ ಖರೆ ಅವರಿಗೆ ನೀಡಿದ ದೂರಿನಲ್ಲಿ ಈಶ್ವರಪ್ಪ ಒತ್ತಾಯಿಸಿದ್ದಾರೆ.ಈ ಹಿಂದೆಯೂ ತಮಗೆ ಬೆದರಿಕೆ ಕರೆ ಬಂದಿತ್ತು. ಈ ವಿಷಯವನ್ನು ನಾನು ಗೃಹ ಸಚಿವ ಪರಮೇಶ್ವರ್ ಅವರ ಗಮನಕ್ಕೆ ತಂದಿದ್ದೆ.  ಆದರೆ ಸರ್ಕಾರ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video