ಗೌರಿ ಲಂಕೇಶ್ ಹತ್ಯೆ: ಎಸ್ ಐಟಿ ತನಿಖಾ ತಂಡದ ಜೊತೆ ಚರ್ಚೆ ನಡೆಸಿದ ಸಿಎಂ ಸಿದ್ದರಾಮಯ್ಯ
ಹಿರಿಯ ಪತ್ರಕರ್ತೆ ಹಾಗೂ ವಿಚಾರವಾದಿ ಗೌರಿ ಲಂಕೇಶ್ ಹತ್ಯೆ ಸಂಬಂಧ ಶುಕ್ರವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆದಿದ್ದು, ಸಭೆಯಲ್ಲಿ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ ಐಟಿ ಅಧಿಕಾರಿಗಳು ಪಾಲ್ಗೊಂಡಿದ್ದಾರೆ.
ಬೆಂಗಳೂರು: ಹಿರಿಯ ಪತ್ರಕರ್ತೆ ಹಾಗೂ ವಿಚಾರವಾದಿ ಗೌರಿ ಲಂಕೇಶ್ ಹತ್ಯೆ ಸಂಬಂಧ ಶುಕ್ರವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆದಿದ್ದು, ಸಭೆಯಲ್ಲಿ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ ಐಟಿ ಅಧಿಕಾರಿಗಳು ಪಾಲ್ಗೊಂಡಿದ್ದಾರೆ.
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ತನಿಖೆಯನ್ನು ಚುರುಕುಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಈ ಸಂಬಂಧ ಖುದ್ಧು ಸಿಎಂ ಸಿದ್ದರಾಮಯ್ಯ ಅವರೇ ಎಸ್ ಐಟಿ ಅಧಿಕಾರಿಗಳಿಂದ ತನಿಖೆಯ ಪ್ರಗತಿಯ ವಿವರಗಳನ್ನು ಪರಿಶೀಲಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರೊಂದಿಗೆ ರಾಜ್ಯ ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರೂ ಕೂಡ ಸಭೆಯಲ್ಲಿ ಪಾಲ್ಗೊಂಡಿದ್ದರು.
ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಹಲವು ಸೂಚನೆಗಳನ್ನು ನೀಡಿದ್ದು, ಈ ಪೈಕಿ ತನಿಖೆ ತೀವ್ರಗೊಳಿಸುವಂತೆ ನಿರ್ದೇಶನ ನೀಡಲಾಗಿದೆ. ಇದಕ್ಕಾಗಿ ಅಗತ್ಯ ಬಿದ್ದರೆ ಹೆಚ್ಚವರಿ ಸಿಬ್ಬಂದಿಗಳನ್ನೂ ಕೂಡ ಬಳಸಿಕೊಳ್ಳುವಂತೆ ಪೂರ್ಣ ಸ್ವತಂತ್ರ್ಯ ನೀಡಲಾಗಿದೆ ಎಂದು ತಿಳಿದುಬಂದಿದೆ.
ಗೌರಿ ಲಂಕೇಶ್ ಮನೆ, ಕಚೇರಿಗಳ ಬಳಿ ಇಂದೂ ನಡೆದ ಅಧಿಕಾರಿಗಳ ಶೋಧ
ಇನ್ನು ಪತ್ರಕರ್ತೆ ಗೌರಿ ಲಂಕೇಶ್ ಅವರ ಸಾವಿನ ಕುರಿತಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳದ ಸಿಬ್ಬಂದಿ ಇಂದೂ ಗೌರಿ ಲಂಕೇಶ್ ಅವರ ರಾಜರಾಜೇಶ್ವರಿ ನಗರದ ನಿವಾಸ ಹಾಗೂ ಬಸವನ ಗುಡಿಯಲ್ಲಿರುವ ಕಚೇರಿಯಲ್ಲಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.