ಮಂಗಳೂರು: ಬಿಜೆಪಿ ಯುವಮೋರ್ಚಾ ಮಂಗಳೂರು ಚಲೊ ಸಂದರ್ಭದಲ್ಲಿ ಬಂಧಿಸಿದ ಕಾರ್ಯಕರ್ತರ ಬಿಡುಗಡೆ ವಿಚಾರದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಕದ್ರಿ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಮಾರುತಿ ನಾಯ್ಕ ಅವರೊಂದಿಗೆ ಒರಟಾಗಿ ವರ್ತಿಸಿ, ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಆರೋಪದಡಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.
ಮಂಗಳೂರು ಚಲೋ ಸಂದರ್ಭದಲ್ಲಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರಲ್ಲಿ ಕೆಲವರನ್ನು ಬಂಧಿಸಿ ಕದ್ರಿಯ ಗೋರಕ್ಷನಾಥ ಸಭಾಂಗಣಕ್ಕೆ ಕರೆತಂದು ನಿಯಮಾವಳಿಯಂತೆ ಸಹಿ ತೆಗೆದುಕೊಳ್ಳಲಾಗುತ್ತಿತ್ತು. ಈ ವೇಳೆ ಸಭಾಂಗಣಕ್ಕೆ ಆಗಮಿಸಿದ ಸಂಸದ ನಳಿನ್ ಕುಮಾರ್ ಕದ್ರಿ ಇನ್‌ಸ್ಪೆಕ್ಟರ್ ಮಾರುತಿ ನಾಯ್ಕ ಜತೆ ಒರಟಾಗಿ ವರ್ತಿಸಿದ್ದಾರೆ ಎನ್ನಲಾಗಿದೆ.
ಕಾರ್ಯಕರ್ತರನ್ನು ತಕ್ಷಣ ಬಿಡುಗಡೆ ಮಾಡದಿದ್ದರೆ ಜಿಲ್ಲಾ ಬಂದ್ ಗೆ ಕರೆ ನೀಡುವುದಾಗಿ ಬೆದರಿಕೆ ಹಾಕಿದ್ದ ಕಾರಣ ಪೊಲೀಸರು ನಳಿನ್ ಮತ್ತಿತರರ ಮೇಲೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.