ಪವನ್ ಕಲ್ಯಾಣ್ 
ರಾಜ್ಯ

ಓರ್ವ ಗೌರಿಯನ್ನು ಕೊಂದರೆ ಲಕ್ಷ ಗೌರಿಯರು ಹುಟ್ಟುತ್ತಾರೆ: ಪವನ್ ಕಲ್ಯಾಣ್

ಹಿರಿಯ ಪತ್ರಕರ್ತೆ, ಸಾಹಿತಿ ಹಾಗೂ ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆಯನ್ನು ನಟ, ರಾಜಕಾರಣಿ ಪವನ್ ಕಲ್ಯಾಣ್ ತೀವ್ರವಾಗಿ ಖಂಡಿಸಿದ್ದಾರೆ...

ಬೆಂಗಳೂರು: ಹಿರಿಯ ಪತ್ರಕರ್ತೆ, ಸಾಹಿತಿ ಹಾಗೂ ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆಯನ್ನು ನಟ, ರಾಜಕಾರಣಿ ಪವನ್ ಕಲ್ಯಾಣ್ ತೀವ್ರವಾಗಿ ಖಂಡಿಸಿದ್ದಾರೆ. 
ಜನಸೇನಾ ಪಕ್ಷ(ಜೆಎಸ್ಪಿ)ದ ಅಧ್ಯಕ್ಷರಾಗಿರುವ ಪವನ್ ಕಲ್ಯಾಣ್ ಅವರು ಓರ್ವ ಗೌರಿಯನ್ನು ಕೊಂದರೆ ಲಕ್ಷ ಲಕ್ಷ ಗೌರಿಯರು ಹುಟ್ಟುತ್ತಾರೆ. ಸಾಮಾಜಿಕ ಬದ್ಥತೆ ಹಾಗೂ ಸಾಮಾಜಿಕ ನ್ಯಾಯಕ್ಕಾಗಿ ಪೆನ್ ಹಿಡಿದು ಹೋರಾಡುವ ವ್ಯಕ್ತಿಯನ್ನು ಗುಂಡಿಟ್ಟು ಕೊಲ್ಲುವುದರಿಂದ ಅವರ ಅಭಿವ್ಯಕ್ತಿಯನ್ನು ತಡೆಯಲು ಸಾಧ್ಯವಿಲ್ಲ ಎಂದು ಸರಣಿ ಟ್ವೀಟ್ ಗಳನ್ನು ಮಾಡಿದ್ದಾರೆ.
ಇನ್ನು ಗೌರಿ ಲಂಕೇಶ್ ಹತ್ಯೆಯಿಂದೆ ಬಲಪಂಥಿಯರ ಕೈವಾಡ ಇದೆ ಎಂಬ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಮತ್ತೊಂದು ಟ್ವೀಟ್ ಮಾಡಿರುವ ಪವನ್ ಕಲ್ಯಾಣ್ ನಾನು ವಾಸ್ತವಾಂಶ ತಿಳಿಯದೇ ಈ ಹತ್ಯೆಗಾಗಿ ಹಿಂದುತ್ವ ಶಕ್ತಿಗಳನ್ನು ನಾನು ದೂಷಿಸಲಾರೆ ಎಂದು ಟ್ವೀಟಿಸಿದ್ದಾರೆ.
ಕಳೆದ ಮಂಗಳವಾರ ರಾತ್ರಿ ಗೌರಿ ಲಂಕೇಶ್ ಅವರನ್ನು ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆಗೈದು ಪರಾರಿಯಾಗಿದ್ದರು. ಈ ಹತ್ಯೆಯನ್ನು ವಿಚಾರವಾದಿಗಳು, ಹಿರಿಯ ನಟರು ಸೇರಿದಂತೆ ಹಲವರು ಖಂಡಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!