ಹಿರಿಯ ಪತ್ರಕರ್ತೆ ಹಾಗೂ ಪ್ರಗತಿಪರ ಚಿಂತಕಿ ಗೌರಿ ಲಂಕೇಶ್
ಬೆಂಗಳೂರು: ಹಿರಿಯ ಪತ್ರಕರ್ತೆ ಹಾಗೂ ಪ್ರಗತಿಪರ ಚಿಂತಕಿ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿದಂತೆ ಕರ್ನಾಟಕ ಸರ್ಕಾರವು ಕೇಂದ್ರ ಗೃಹ ಸಚಿವಾಲಯಕ್ಕೆ ವಸ್ತುಸ್ಥಿತಿ ವರದಿಯೊಂದನ್ನು ಶುಕ್ರವಾರ ಸಲ್ಲಿಕೆ ಮಾಡಿದೆ ಎಂದು ತಿಳಿದುಬಂದಿದೆ.
ರಾಜ್ಯದ ಮುಖ್ಯಕಾರ್ಯದರ್ಶಿಗಳು ಕೇಂದ್ರ ಗೃಹ ಸಚಿವಾಲಯಕ್ಕೆ ವಾಸ್ತವ ವರದಿಯನ್ನು ಸಲ್ಲಿಕೆ ಮಾಡಿದ್ದು, ವರದಿಯಲ್ಲಿ ಗೌರಿ ಲಂಕೇಶ್ ಅವರ ಹತ್ಯೆ ಮತ್ತು ನಂತರ ಪೊಲೀಸರು ಕೈಗೊಂಡ ಕ್ರಮಗಳ ಕುರಿತಂತೆ ವಿಸ್ತೃವಾಗಿ ವಿವರಿಸಿದ್ದಾರೆ. ಅಲ್ಲದೆ, ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವೊಂದನ್ನು ರಚಿಸಿರುವ ಅಂಶವನ್ನೂ ನಮೂದಿಸಿದ್ದಾರೆಂದು ತಿಳಿದುಬಂದಿದೆ.
ಸೆ.5 ರ ರಾತ್ರಿ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ಗೌರಿ ಲಂಕೇಶ್ ಅವರ ನಿವಾಸದ ಬಳಿಯೇ ದುಷ್ಕರ್ಮಿಗಳ ತಂಡವೊಂದು ಗುಂಡು ಹಾರಿಸಿ ಹತ್ಯೆ ಮಾಡಿದ್ದರು. ಗೌರಿ ಲಂಕೇಶ್ ಅವರ ಹತ್ಯೆಗೆ ದೇಶದಾದ್ಯಂತ ವ್ಯಾಪಕ ಖಂಡನೆಗಳು ವ್ಯಕ್ತವಾಗಿದ್ದವು. ರಾಜ್ಯ ಸೇರಿದಂತೆ ದೇಶದ ವಿವಿಧ ನಾಯಕರು ಹತ್ಯೆಗೆ ತೀವ್ರ ಖಂಡನೆ ವ್ಯಕ್ತಪಡಿಸಿದ್ದರು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಕೇಂದ್ರ ಗೃಹ ಸಚಿವಾಲಯ ಪತ್ರಕರ್ತೆ ಹತ್ಯೆ ಕುರಿತಂತೆ ಕೂಡಲೇ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics