ಗೌರಿ ಲಂಕೇಶ್ 
ರಾಜ್ಯ

ಗೌರಿ ಲಂಕೇಶ್ ಹತ್ಯೆ ತನಿಖಾ ತಂಡಕ್ಕೆ ಮತ್ತಷ್ಟು ಬಲ; ಎಸ್ಐಟಿಗೆ ಹೆಚ್ಚುವರಿಯಾಗಿ 40 ಸಿಬ್ಬಂದಿ ನೇಮಕ

ಹಿರಿಯ ಪತ್ರಕರ್ತೆ, ಸಾಹಿತಿ ಹಾಗೂ ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಲಾಗಿದ್ದು, ವಿಶೇಷ ತನಿಖಾ....

ಬೆಂಗಳೂರು: ಹಿರಿಯ ಪತ್ರಕರ್ತೆ, ಸಾಹಿತಿ ಹಾಗೂ ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಲಾಗಿದ್ದು, ವಿಶೇಷ ತನಿಖಾ ತಂಡ(ಎಸ್ಐಟಿ)ವನ್ನು ಮತ್ತಷ್ಟು ಬಲಪಡಿಸುವುದಕ್ಕಾಗಿ ಹೆಚ್ಚುವರಿಯಾಗಿ 40 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಪತ್ರಕರ್ತೆ ಹತ್ಯೆಯಾಗಿ ಆರು ದಿನ ಕಳೆದರೂ ಇದುವರೆಗೂ ಹಂತಕರ ಬಗ್ಗೆ ಯಾವುದೇ ಸುಳಿವು ಲಭ್ಯವಾಗಿಲ್ಲ. ಹೀಗಾಗಿ ಶೀಘ್ರ ಹಂತಕರನ್ನು ಪತ್ತೆ ಹಚ್ಚುವುದಕ್ಕಾಗಿ ನಾಲ್ವರು ಇನ್ಸ್ ಪೆಕ್ಟರ್ ಮತ್ತು ಏಳು ಸಬ್ ಇನ್ಸ್ ಪೆಕ್ಟರ್ ಸೇರಿದಂತೆ ಎಸ್ಐಟಿಗೆ ಹೆಚ್ಚುವರಿಯಾಗಿ 40 ಸಿಬ್ಬಂದಿ ನೀಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ರಾಜ್ಯ ಸರ್ಕಾರ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆಗಾಗಿ ಪೊಲೀಸ್ ಮಹಾ ನಿರ್ದೇಶಕ(ಗುಪ್ತಚರ) ಬಿ ಕೆ ಸಿಂಗ್ ನೇತೃತ್ವದ 21 ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡ ರಚಿಸಿದೆ.
ಎಸ್ಐಟಿಗೆ ಹೆಚ್ಚುವರಿ ಸಿಬ್ಬಂದಿಯನ್ನು ನೀಡಲಾಗಿದೆ. ಆದರೆ ಈ ಸಂದರ್ಭದಲ್ಲಿ ಅವರ ಹೆಸರನ್ನು ಬಹಿರಂಗಪಡಿಸುವುದಿಲ್ಲ ಎಂದು ಉಪ ಪೊಲೀಸ್ ಆಯುಕ್ತ(ಬೆಂಗಳೂರು ಪಶ್ಚಿಮ) ಎಂ ಎನ್ ಅನುಚೇತ್ ಅವರು ಹೇಳಿದ್ದಾರೆ.
ರಾಜರಾಜೇಶ್ವರಿ ನಗರದಲ್ಲಿರುವ ಕೆಲವು ಮನೆಗಳ ಸಿಸಿಟಿವಿ ದೃಶ್ಯಗಳನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೆ ನಗರದ ಸುತ್ತ ಇರುವ ಐದು ಟೋಲ್ ಗೇಟ್ ಗಳ ಸಿಸಿಟಿವಿ ದೃಶ್ಯಗಳನ್ನು ಪಡೆದುಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈ ಮಧ್ಯೆ ಇಂದು ಬೆಳಗ್ಗೆ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ನಕ್ಸಲರಾದ ನೂರ್ ಶ್ರೀಧರ್ ಹಾಗೂ ಸಿರಿಮನೆ ನಾಗರಾಜ್ ಅವರು, ಗೌರಿ ಲಂಕೇಶ್ ಅವರನ್ನು ಯಾವುದೇ ಕಾರಣಕ್ಕೂ ನಕ್ಸಲರು ಹತ್ಯೆ ಮಾಡಿರುವ ಸಾಧ್ಯತೆ ಇಲ್ಲ ಎಂದು ಹೇಳಿದ್ದಾರೆ.
ಕಳೆದ ಮಂಗಳವಾರ ರಾತ್ರಿ ಗೌರಿ ಲಂಕೇಶ್ ಅವರನ್ನು ಅವರ ರಾಜರಾಜೇಶ್ವರಿನಗರದ ನಿವಾಸದ ಮುಂದೆಯೇ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಪತ್ರಕರ್ತೆಯ ಹತ್ಯೆಗೆ ದೇಶಾದ್ಯಂತ ತೀವ್ರ ಖಂಡನೆ ವ್ಯಕ್ತವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!