ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಬರಹಗಾರರು, ಚಿಂತಕರು ಸೇರಿ 16 ಮಂದಿಗೆ ಸರ್ಕಾರದಿಂದ ಪೊಲೀಸ್ ಭದ್ರತೆ

ಜೀವ ಬೆದರಿಕೆ ಹಿನ್ನೆಲೆಯಲ್ಲಿ ನಗರದಲ್ಲಿರುವ ಬರಹಗಾರರು ಹಾಗೂ ಚಿಂತಕರು ಸೇರಿ 16 ಮಂದಿಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ....

ಬೆಂಗಳೂರು: ಜೀವ ಬೆದರಿಕೆ ಹಿನ್ನೆಲೆಯಲ್ಲಿ ನಗರದಲ್ಲಿರುವ ಬರಹಗಾರರು ಹಾಗೂ ಚಿಂತಕರು ಸೇರಿ 16 ಮಂದಿಗೆ  ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಹಿನ್ನೆಲೆಯಲ್ಲಿ,  ಸಿಎಂ ಸಿದ್ದರಾಮಯ್ಯ ನಿರ್ದೇಶನದಂತೆ 16 ಮಂದಿಗೆ ಪೊಲೀಸ್ ಭದ್ರತೆ ನೀಡಲಾಗಿದೆ. ಗುಪ್ತಚರ ಇಲಾಖೆ ವರದಿ ಅನ್ವಯ ಇವರಿಗೆಲ್ಲಾ ಒಬ್ಬೊಬ್ಬ ಸೆಕ್ಯೂರಿಟಿ ಅಧಿಕಾರಿಯನ್ನು ನಿಯೋಜಿಸಲಾಗಿದೆ.
ಸಂಶೋಧಕ ಎಂ.ಚಿದಾನಂದಮೂರ್ತಿ, ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್‌. ದೊರೆಸ್ವಾಮಿ, ಗಿರೀಶ್ ಕಾರ್ನಾಡ, ಚಂದ್ರಶೇಖರ ಕಂಬಾರ, ಬರಗೂರು ರಾಮಚಂದ್ರಪ್ಪ, ಡಾ. ಸಿದ್ದಲಿಂಗಯ್ಯ, ಸಿಎಂ ಸಲಹೆಗಾರ ದಿನೇಶ್ ಅಮಿನ್ ಮಟ್ಟು, ನಿವೃತ್ತ ಐಎಎಸ್ ಅಧಿಕಾರಿ ಎಸ್.ಎ ಜಾಮದಾರ್ ಅವರಿಗೆ ಸರ್ಕಾರ ಭದ್ರತೆ ಒದಗಿಸಿದೆ.
ನಿಡುಮಾಮಿಡಿ ಮಠದ ಚೆನ್ನಮಲ್ಲಸ್ವಾಮೀಜಿ, ಚಂದ್ರಶೇಖರ ಪಾಟೀಲ, ಪ್ರಜಾ ಪರಿವರ್ತನಾ ವೇದಿಕೆಯ ಬಿ. ಗೋಪಾಲ, ಸಿ.ಎಸ್‌. ದ್ವಾರಕನಾಥ್, ಕೆ. ಮರುಳಸಿದ್ದಪ್ಪ, ಬಿ.ಟಿ. ಲಲಿತಾನಾಯಕ್, ಟಿ.ಎನ್. ಸೀತಾರಾಂ,   ಕೆ.ಎಸ್. ವಿಮಲಾ, ಅವರಿಗೂ ಪೊಲೀಸ್ ಭದ್ರತೆ ನೀಡಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಧ್ಯಪ್ರದೇಶ: ಕಾಫ್ ಸಿರಪ್ ಸೇವಿಸಿ ಮೂತ್ರಪಿಂಡ ವೈಫಲ್ಯ; ಚಿಕಿತ್ಸೆ ಪಡೆಯುತ್ತಿದ್ದ 6 ಮಕ್ಕಳ ಮರಣ; ಸಾವಿನ ಸಂಖ್ಯೆ 20ಕ್ಕೆ ಏರಿಕೆ

BiggBoss Kannada: ಬಿಗ್ ಬಾಸ್ 12 ಮನೆಗೆ ಬೀಗಮುದ್ರೆ, ಜಾಲಿವುಡ್ ಸ್ಟುಡಿಯೋಸ್ ಇಂದು ಹೈಕೋರ್ಟ್ ಮೊರೆ?

ರಾಜಕೀಯ ಒತ್ತಡಕ್ಕೆ ಮಣಿದು ಆತುರಾತುರವಾಗಿ ಸಮೀಕ್ಷೆ ನಡೆಸುತ್ತಿದ್ದಾರೆ: BJP ಟೀಕೆ

ನಮ್ಮ ತಟ್ಟೆಯಲ್ಲಿರುವ ಅನ್ನ ಕಿತ್ತುಕೊಳ್ಳಬೇಡಿ: ಕುರುಬ ಸಮುದಾಯ ST ಸೇರ್ಪಡೆ ಪ್ರಸ್ತಾಪಕ್ಕೆ VS ಉಗ್ರಪ್ಪ ವಿರೋಧ

ಹಿಮಾಚಲದಲ್ಲಿ ಭಾರಿ ಭೂಕುಸಿತ: ಬಸ್‌ ಮೇಲೆಯೇ ಬಿದ್ದ ಪರ್ವತ; ಕನಿಷ್ಠ 18 ಮಂದಿ ಸಾವು

SCROLL FOR NEXT