ರಾಜ್ಯ

ರಾಜೀನಾಮೆಗೆ ನಗರಾಭಿವೃದ್ಧಿ ಸಚಿವ ಜಾರ್ಜ್ ನಕಾರ: ತಾಳ್ಮೆಯಿಂದ ಇರಲು ಬಿಜೆಪಿಗೆ ಸಲಹೆ

Srinivas Rao BV
ಬೆಂಗಳೂರು: ಡಿವೈಎಸ್ ಪಿ ಗಣಪತಿ ಸಾವಿನ ಪ್ರಕರಣವನ್ನು ಸುಪ್ರೀಂ ಕೋರ್ಟ್ ಸಿಬಿಐ ತನಿಖೆಗೆ ವಹಿಸುತ್ತಿದ್ದಂತೆಯೇ, ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ನಗರಾಭಿವೃದ್ಧಿ ಸಚಿವ ಕೆಜೆ ಜಾರ್ಜ್ ರಾಜೀನಾಮೆಗೆ ಒತ್ತಡ ಹೆಚ್ಚುತ್ತಿದೆ. ಆದರೆ ರಾಜೀನಾಮೆ ನೀಡಲು ಜಾರ್ಜ್ ನಿರಾಕರಿಸಿದ್ದಾರೆ. 
ಗಣಪತಿ ನಿಗೂಢ ಸಾವಿನ ಪ್ರಕರಣದಲ್ಲಿ ನಾನೇನು ತಪ್ಪು ಮಾಡಿಲ್ಲ. ಆದ್ದರಿಂದ ರಾಜೀನಾಮೆ ನೀಡುವ ಪ್ರಶ್ನೆಯೇ ಎದುರಾಗುವುದಿಲ್ಲ ಎಂದು ಜಾರ್ಜ್ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಜಾರ್ಜ್, ತಮ್ಮ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಿಜೆಪಿ ನಡೆಯನ್ನು ಟೀಕಿಸಿದ್ದಾರೆ. 
"ನನ್ನ ರಾಜೀನಾಮೆಗೆ ಆಗ್ರಹಿಸುತ್ತಿರುವ ಬಿಜೆಪಿಯವರು ಸ್ವಲ್ಪ ತಾಳ್ಮೆಯಿಂದ ಇದ್ದು ತನಿಖೆಯ ಫಲಿತಾಂಶ ಏನಾಗುತ್ತದೆ ಎಂಬುದನ್ನು ಕಾದು ನೋಡಲಿ" ಎಂದು ಜಾರ್ಜ್ ಬಿಜೆಪಿಗೆ ಸಲಹೆ ನೀಡಿದ್ದಾರೆ. 
SCROLL FOR NEXT