ಹಿರಿಯ ಪತ್ರಕರ್ತೆ ಹಾಗೂ ಪ್ರಗತಿಪರ ಚಿಂತಕಿ ಗೌರಿ ಲಂಕೇಶ್ 
ರಾಜ್ಯ

ಗೌರಿ ಹತ್ಯೆ ಪ್ರಕರಣ: ಹಂತಕರ ಬಂಧನಕ್ಕೆ ಕೇಂದ್ರದ ನೆರವಿಗೆ ಎಸ್ಐಟಿ ಚಿಂತನೆ

ಹಿರಿಯ ಪತ್ರಕರ್ತೆ ಹಾಗೂ ಪ್ರಗತಿಪರ ಚಿಂತಕಿ ಗೌರಿ ಲಂಕೇಶ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂತಕರಿಗಾಗಿ ಬಲೆ ಬೀಸಿರುವ ವಿಶೇಷ ತನಿಖಾ ದಳ, ತನಿಖೆಗಾಗಿ ಶೀಘ್ರದಲ್ಲಿಯೇ ಕೇಂದ್ರದ ನೆರವು ಕೇಳಲು ಚಿಂತನೆ ನಡೆಸುತ್ತಿದೆ...

ಬೆಂಗಳೂರು: ಹಿರಿಯ ಪತ್ರಕರ್ತೆ ಹಾಗೂ ಪ್ರಗತಿಪರ ಚಿಂತಕಿ ಗೌರಿ ಲಂಕೇಶ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂತಕರಿಗಾಗಿ ಬಲೆ ಬೀಸಿರುವ ವಿಶೇಷ ತನಿಖಾ ದಳ, ತನಿಖೆಗಾಗಿ ಶೀಘ್ರದಲ್ಲಿಯೇ ಕೇಂದ್ರದ ನೆರವು ಕೇಳಲು ಚಿಂತನೆ ನಡೆಸುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. 
ಹತ್ಯೆ ಪ್ರಕರಣ ಸಂಬಂಧ ತನಿಖೆ ನಡೆಸಲು ಅಗತ್ಯವಿರುವ ಸಾಕ್ಷ್ಯಗಳು ಹಾಗೂ ಮಾಹಿತಿಗಳು ಲಭ್ಯವಾಗದ ಹಿನ್ನಲೆಯಲ್ಲಿ ಕೇಂದ್ರದ ಸಂಸ್ಥೆಗಳಾಗಿರುವ ಸಿಬಿಐ ಹಾಗೂ ಇನ್ನಿತರೆ ಸಂಸ್ಥೆಗಳ ನೆರವು ಕೇಳಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ. 
ಮೂಲಗಳ ಪ್ರಕಾರ, ಪ್ರಕರಣ ಸಂಬಂಧ ತನಿಖಾಧಿಕಾರಿಗಳಿಗೆ ಸಿಸಿಟಿವಿ ದೃಶ್ಯಾವಳಿಗಳನ್ನು ಬಿಟ್ಟರೆ, ಬೇರಾವುದೇ ಸಾಕ್ಷ್ಯಾಧಾರಗಳು ಲಭ್ಯವಾಗಿಲ್ಲ. ಹೀಗಾಗಿ ತನಿಖೆ ಅಧಿಕಾರಿಗಳಿಗೆ ದೊಡ್ಡ ತಲೆನೋವಾಗಿ ಪರಿಗಣಿಸಿದ್ದು, ಎಲ್ಲಾ ಆಯಾಮಗಳಲ್ಲೂ ಅಧಿಕಾರಿಗಳು ತನಿಖೆ ನಡೆಸಲು ನಿರ್ಧರಿಸಿದ್ದಾರೆಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. 
ಪ್ರಕರಣ  ಸಂಬಂಧ ನಿನ್ನೆಯಷ್ಟೇ ಸ್ಫಷ್ಟನೆ ನೀಡಿರುವ ಗೃಹ ಸಚಿವಾಲಯ, ಗೌರಿ ಹತ್ಯೆ ಪ್ರಕರಣವನ್ನು ವಿಶೇಷ ತನಿಖಾ ದಳವೇ ತನಿಖೆ ನಡೆಸಲಿದೆ ಎಂದು ಹೇಳಿದೆ. 
ಕೆಲ ದಿನಗಳ ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಗೌರಿ ಲಂಕೇಶ್ ಅವರ ಕುಟುಂಬಸ್ಥರು ಸಿಬಿಐ ತನಿಖೆಗೆ ಒತ್ತಾಯಿಸಿದ್ದೇ ಆದರೆ, ಪ್ರಕರಣವನ್ನು ಸಿಬಿಐಗೆ ವಹಿಸಲಾಗುತ್ತದೆ ಎಂದು ಹೇಳಿದ್ದರು. 
ಇದಾದ ಬಳಿಕ ಹೇಳಿಕೆ ನೀಡಿದ್ದ ಗೌರಿಯವರ ತಾಯಿ ಹಾಗೂ ಕಾರ್ಯಕರ್ತರು, ರಾಜ್ಯ ಪೊಲೀಸರ ಮೇಲೆ ನಮಗೆ ಸಂಪೂರ್ಣ ನಂಬಿಕೆಯಿದೆ. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವ ಅಗತ್ಯವಿಲ್ಲ ಎಂದಿದ್ದರು. 
 ಪ್ರಕರಣ ಸಂಬಂಧ 61 ಸದಸ್ಯದರ ಎಸ್ಐಟಿ ತಂಡವನ್ನು ರಚಿಸಲಾಗಿದ್ದು, ಈಗಾಗಲೇ ಗೌರಿ ಯವರ ಮೊಬೈಲ್ ಸಂಖ್ಯೆ ಕಾಲ್ ರೆಕಾರ್ಡ್ ಗಳ ವರದಿಗಳು, ಸಿಸಿಟಿವಿ ದೃಶ್ಯಾವಳಿಗಳು ಹಾಗೂ ಇನ್ನಿತರೆ ಸಾಕ್ಷ್ಯಗಳನ್ನು ವಶಕ್ಕೆ ಪಡೆಯಲಾಗಿದೆ. ಇನ್ನು ಗೌರಿಯವರೊಂದಿಗೆ ಪ್ರತಿನಿತ್ಯ ಮಾತುಕತೆ ನಡೆಸುತ್ತಿದ್ದ ವ್ಯಕ್ತಿಗಳು ತನಿಖಾ ತಂಡದೊಂದಿಗೆ ಸರಿಯಾದ ರೀತಿಯಲ್ಲಿ ಸಹಕಾರವನ್ನು ನೀಡಿಲ್ಲ ಎಂದು ಅಧಿಕಾರಿ ಹೇಳಿದ್ದಾರೆ. 
ಸೆ.5ರ ರಾತ್ರಿ ಗೌರಿಯವರ ಹತ್ಯೆಯಾದ ಬಳಿಕ ಸಿಸಿಟಿವಿಯ ಎಲ್ಲಾ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಲಾಗಿದೆ. ಆದರೆ, ದೃಶ್ಯಾವಳಿಗಳು ಸ್ಫಷ್ಟವಾಗಿಲ್ಲ. ಈ ವರೆಗೂ 42 ಸಿಸಿಟಿವಿಗಳನ್ನು ವಶಕ್ಕೆ ಪಡೆಯಲಾಗಿದೆ. ಕೆಲ ಸಿಸಿಟಿವಿ ಕ್ಯಾಮೆರಾಗಳು ಸರಿಯಾದ ರೀತಿಯಲ್ಲಿ ಕಾರ್ಯನಿರ್ವಹಿಸಿಲ್ಲ. ಇನ್ನು ಗೌರಿಯವರ ನಿವಾಸದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ದೃಶ್ಯಾವಳಿಗಳು ಸೆರೆಯಾಗಿದೆ. ಆದರೆ, ಹಂತಕ ಹೆಲ್ಮೆಟ್ ಧರಿಸಿದ್ದ, ಹತ್ಯೆ ಮಾಡಿದ ಬಳಿಕವೂ ಆತ ಹೆಲ್ಮೆಟ್ ನ್ನು ತೆಗೆದಿಲ್ಲ ಎಂದು ಹೇಳಿಕೊಂಡಿದ್ದಾರೆ. 
ಪ್ರಕರಣದ ತನಿಖೆ ನಡೆಸುತ್ತಿರುವ ಅಧಿಕಾರಿಗಳು ಹತ್ಯೆ ಹಿಂದೆ ಎಂಡಪಂಥೀಯರ ಕೈವಾಡವಿದೆ ಎಂದು ಶಂಕಿಸಿದ್ದು, ಈ ಆಯಾಮದಲ್ಲಿಯೂ ತನಿಖೆ ನಡೆಸುತ್ತಿದ್ದಾರೆ. ಆದರೆಸ ಈ ಬಗ್ಗೆ ಎಸ್ಐಟಿ ಯಾವುದೇ ಅಧಿಕೃತ ಮಾಹಿತಿಯಾಗಲೀ, ಹೇಳಿಕೆಗಳನ್ನಾಗಲೀ ನೀಡಿಲ್ಲ ಎಂದು ಮೂಲಗಳು ತಿಳಿಸಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ