ರಾಜ್ಯ

ವಿದ್ಯುತ್ ಚಾಲಿತ ವಾಹನ ನೀತಿಗೆ ರಾಜ್ಯ ಸಚಿವ ಸಂಪುಟ ಅನುಮೋದನೆ

Sumana Upadhyaya
ಬೆಂಗಳೂರು: ರಾಜ್ಯ ಸಚಿವ ಸಂಪುಟ ನಿನ್ನೆ ವಿದ್ಯುತ್ ಚಾಲಿತ ವಾಹನ ಮತ್ತು ಇಂಧನ ಸಂಗ್ರಹ ನೀತಿಗೆ ಒಪ್ಪಿಗೆ ನೀಡಿದೆ. ಈ ಮೂಲಕ ವಿದ್ಯುತ್ ಚಾಲಿತ ವಾಹನಗಳ ತಯಾರಿಗೆ ಒಪ್ಪಿಗೆ ನೀಡಿದ ದೇಶದ ಮೊದಲ ರಾಜ್ಯವಾಗಿದೆ.
ಮಾಲಿನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಪಳೆಯುಳಿಕೆ ಇಂಧನವನ್ನು ಬಳಸುವ ವಾಹನಗಳ ಅಭಿವೃದ್ಧಿ ಮತ್ತು ಉತ್ಪಾದನೆಯನ್ನು ಉತ್ತೇಜಿಸುವುದು ಈ ನೀತಿಯ ಉದ್ದೇಶವಾಗಿದೆ.
ಸಂಶೋಧನೆ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲು ಮತ್ತು ರಾಜ್ಯದಲ್ಲಿ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು ಸಿದ್ಧರಿರುವವರಿಗೆ ಆಕರ್ಷಕ ಪ್ರೋತ್ಸಾಹ ಮತ್ತು ತೆರಿಗೆ ವಿನಾಯಿತಿಗಳನ್ನು ಹೊಂದಿರುತ್ತದೆ.
ಇದೇ ರೀತಿಯ ಯೋಜನೆ ಅಭಿವೃದ್ಧಿ ಹೊಂದಿದ ದೇಶಗಳಲ್ಲಿವೆ. ಸಾಮಾನ್ಯವಾಗಿ ವಿದ್ಯುತ್ ಚಾಲಿತ ವಾಹನಗಳ ಅಧಿಕ ವೆಚ್ಚ ಮತ್ತು ಇತರ ಕೆಲವೊಂದು ಕಾರಣಗಳಿಂದಾಗಿ ಖರೀದಿಸಲು ಹಿಂದೇಟು ಹಾಕುತ್ತಾರೆ. ಆದರೆ ಬೆಂಗಳೂರಿನಂತಹ ನಗರಗಳಲ್ಲಿ ಮಾಲಿನ್ಯವನ್ನು ತಡೆಗಟ್ಟಲು ಇದು ಉತ್ತಮವಾಗಿರುತ್ತದೆ ಎಂದು ಸಂಪುಟ ಸಭೆ ನಂತರ ನಿನ್ನೆ ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ಹೇಳಿದರು.
SCROLL FOR NEXT