ಸೈನೈಡ್ ಮೋಹನ್ 
ರಾಜ್ಯ

ಕುಖ್ಯಾತ ಪಾತಕಿ ಸೈನೈಡ್ ಮೋಹನ್ ಗೆ ಜೀವಾವಧಿ ಶಿಕ್ಷೆ

ರಾಜ್ಯವನ್ನು ಬೆಚ್ಚಿ ಬೀಳಿಸಿದ ಸಿರಿಯಲ್ ಕಿಲ್ಲರ್, ಸರಣಿ ಅತ್ಯಾಚಾರ ಪ್ರಕರಣಗಳ ಆರೋಪಿ ಸೈನೈಡ್ ಮೋಹನ್ ಗೆ ನಾಲ್ಕನೇ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ಮಂಗಳೂರು: ರಾಜ್ಯವನ್ನು ಬೆಚ್ಚಿ ಬೀಳಿಸಿದ ಸಿರಿಯಲ್ ಕಿಲ್ಲರ್, ಸರಣಿ ಅತ್ಯಾಚಾರ ಪ್ರಕರಣಗಳ ಆರೋಪಿ ಸೈನೈಡ್ ಮೋಹನ್ ಗೆ ನಾಲ್ಕನೇ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.
ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕೊಲೆ ಹಾಗೂ ಅತ್ಯಾಚಾರದ ನಾಲ್ಕನೇ ಪ್ರಕರಣದಲ್ಲೂ ಸೈನೈಡ್ ಮೋಹನ್ ಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. 
ಸೈನೈಡ್ ಮೋಹನ್ 2004ರಿಂದ 2009ರ ಅವಧಿಯಲ್ಲಿ ಒಟ್ಟು 20 ಮಂದಿ ಯುವತಿಯರನ್ನು ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದ. ಇದರಲ್ಲಿ 2013ರಲ್ಲಿ ಈತ ಒಟ್ಟು ಮೂರು ಪ್ರಕರಣದಲ್ಲಿ ಮರಣದಂಡನೆಗೆ ಗುರಿಯಾಗಿದ್ದಾನೆ. ಇದೀಗ ನಾಲ್ಕನೇ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಈಡಾಗಿದ್ದಾನೆ.
ಪುತ್ತೂರು ತಾಲೂಕಿನ ಪಟ್ಟೆಮಜಲು ಎಂಬಲ್ಲಿನ 22 ವರ್ಷದ ಯುವತಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯವು ಮೋಹನ್‍ನನ್ನು ಈ ಶಿಕ್ಷೆ ವಿಧಿಸಿದೆ. 
ಪುತ್ತೂರು  ಪಟ್ಟೆಮಜಲಿನ ಬೀಡಿ ಕಟ್ಟುವ ಯುವತಿಯನ್ನು ಮೋಹನ, ತನ್ನ ಹೆಸರು ಆನಂದ್ ಎಂದು ಹೇಳಿ ಪರಿಚಯಿಸಿಕೊಂಡಿದ್ದ. ನಂತರ ಮೊಬೈಲ್ ನಂಬರ್ ಪಡೆದುಕೊಂಡು ಸಂಪರ್ಕ ಬೆಳೆಸಿದ್ದ. ಆಕೆಯನ್ನು ಪ್ರೀತಿಸುತ್ತಿದ್ದು ಮದುವೆಯಾಗುವುದಾಗಿ ನಂಬಿಸಿದ್ದ. ನಂತರ ಆಕೆಯನ್ನು ಸೆ. 17 2009ರಂದು ಪುತ್ತೂರಿನ ಬಸ್ ನಿಲ್ದಾಣಕ್ಕೆ ಒಡವೆ ಹಾಕಿಕೊಂಡು ಬಾ ಎಂದು ನಂಬಿಸಿ. ಇಬ್ಬರೂ ಮಡಿಕೇರಿಗೆ ಹೋಗಿ ಅಲ್ಲಿನ ವಸತಿ ನಿಲಯದಲ್ಲಿ ತಂಗಿದ್ದರು. ಯುವತಿಯೊಡನೆ ಲೈಂಗಿಕ ಸಂಪರ್ಕ ನಡೆಸಿ ಇದರಿಂದ ಗರ್ಭ ಧರಿಸುವ ಸಾಧ್ಯತೆ ಇದೆ ಹಾಗಾಗಿ ನಾನು ಕೊಡುವ ಗುಳಿಗೆ ತಿಂದರೆ ಗರ್ಭ ನಿಲ್ಲುವುದಿಲ್ಲ ಎಂದು ಸೈನೈಡ್ ನೀಡಿದ್ದ. ಅದನ್ನು ತಿಂದು ಯುವತಿ ಶೌಚಾಲಯದಲ್ಲಿ ಮೃತಪಟ್ಟ ಬಳಿಕ. ಆಕೆಯ ಬಳಿ ಇದ್ದ ಚಿನ್ನ, ಮೊಬೈಲ್‍ನೊಂದಿಗೆ ಮೋಹನ್ ಪರಾರಿಯಾಗಿದ್ದ. 
ಬಂಟ್ವಾಳದ ಬರಿಮಾರಿನ ಯುವತಿಯ ಕೊಲೆ ಪ್ರಕರಣದ ಪತ್ತೆಯೊಂದಿಗೆ ಸೆನೈಡ್ ಮೋಹನನ ಸರಣಿ ಹತ್ಯೆ ವಿಚಾರ ಬಯಲಾಗಿತ್ತು. ಸೈನೈಡ್ ಮೋಹನನ ಬಂಧನದೊಂದಿಗೆ ಇತರ ಪ್ರಕರಣಗಳೂ ಬೆಳಕಿಗೆ ಬಂದಿದ್ದವು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT