ಯಡಿಯೂರಪ್ಪ 
ರಾಜ್ಯ

ಎಸಿಬಿ ತನಿಖೆ ಕುರುಡನೊಬ್ಬ ಕತ್ತಲೆ ಕೋಣೆಯಲ್ಲಿ ಕಪ್ಪು ಬೆಕ್ಕು ಹುಡುಕುತ್ತಿರುವಂತಿದೆ: ಬಿಎಸ್ ವೈ ವಕೀಲ

: ಶಿವರಾಮ ಕಾರಂತ ಬಡಾವಣೆಯ ಅಕ್ರಮ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಎಸಿಬಿ ದಾಖಲಿಸಿರುವ ಪ್ರಾಥಮಿಕ ...

ಬೆಂಗಳೂರು: ಶಿವರಾಮ ಕಾರಂತ ಬಡಾವಣೆಯ ಅಕ್ರಮ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಎಸಿಬಿ ದಾಖಲಿಸಿರುವ ಪ್ರಾಥಮಿಕ ತನಿಖಾ ವರದಿ ಕತ್ತಲೆ ಕೋಣೆಯಲ್ಲಿ ಕುರುಡು ಕಪ್ಪು ಬೆಕ್ಕು ಹುಡುಕಾಡುವಂತಿದೆ ಎಂದು ಬಿಎಸ್ ವೈ ವಕೀಲ ಸಿವಿ ನಾಗೇಶ್ ಹೇಳಿದ್ದಾರೆ.
ತಮ್ಮ ವಿರುದ್ಧ ದಾಖಲಿಸಿರುವ ಎಫ್ ಐ ಆರ್ ರದ್ದುಗೊಳಿಸಬೇಕೆಂದು ಕೋರಿ ಯಡಿಯೂರಪ್ಪ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರಿದ್ದ ಏಕ ಸದಸ್ಯ ಪೀಠ ಶುಕ್ರವಾರ ವಿಚಾರಣೆ ನಡೆಸಿತು. 
ಯಡಿಯೂರಪ್ಪ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿ.ವಿ ನಾಗೇಶ್,  ಯಾವುದೇ ದೂರು ದಾಖಲಿಸಬೇಕಾದರೇ, ಅದನ್ನು ಪುಷ್ಟೀಕರಿಸುವ ಸಾಕ್ಷ್ಯ ಬೇಕಾಗುತ್ತದೆ.ಎಲ್ಲಿ ಹೇಗೆ ಯಾವಾಗ ಅಪರಾಧ ನಡೆಯಿತು ಎಂಬ ಬಗ್ಗೆ ಅಗತ್ಯ ಪುರಾವೆಗಳನ್ನು ಒದಗಿಸಬೇಕು,ಆದರೆ ಈ ಪ್ರಕರಣದಲ್ಲಿ ಅಂತಹ ಯಾವುದೇ ಸಾಕ್ಷಿ ಒದಗಿಸಿಲ್ಲ. ಜೊತೆಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಡಿನೋಟಿಫಿಕೇಷನ್ ಮಾಡುವಂತೆ ಯಡಿಯೂರಪ್ಪ ಅವರು ಮಾಡಿದ್ದ ಶಿಫಾರಸ್ಸನ್ನು ಪರಿಗಣಿಸಿಲ್ಲ, ಹೀಗಾಗಿ ಇದರಲ್ಲಿ ಯಾವುದೇ ಲಾಭ ಮತ್ತು ನಷ್ಟದ ಮಾತಿಲ್ಲ, ಎಫ್ ಐ ಆರ್ ದಾಖಲಿಸುವ ಅಗತ್ಯವೂ ಇಲ್ಲ ಎಂದು ವಾದಿಸಿದ್ದಾರೆ.
ಇದೇ ವೇಳೆ ಶಾಸಕ ಭೈರತಿ ಬಸವರಾಜ್ ಅವರಿಗೆ ಸೇರಿದ 18 ಎಕರೆ ಭೂಮಿಯನ್ನು ಸರ್ಕಾರ ಡಿನೋಟಿಫೈ ಮಾಡಿರುವ  ದಾಖಲೆಗಳನ್ನು ಅವರು ಕೋರ್ಟ್ ಗೆ ಸಲ್ಲಿಸಿದರು.
2014 ರ ಫೆಬ್ರವರಿ 13ರ ವೇಳೆಗೆ ರಾಜ್ಯಸರ್ಕಾರವೇ 1300 ಎಕರೆ ಜಮೀನು ಶಿವರಾಮ ಕಾರಂತ ಬಡವಾಣೆಯಲ್ಲಿ ಡಿನೋಟಿಫಿಕೇಶನ್‌ ಮಾಡಿದೆ ಎಂದು ಗಮನಸೆಳೆದಿದೆ.ಅದಕ್ಕೆ ಪೂರಕವಾಗಿ  ಕೆಲ ಪ್ರಮುಖ ದಾಖಲೆಗಳನ್ನು ಸಲ್ಲಿಸಿರುವುದು ವಿಚಾರಣೆ ಕುತೂಹಲ ಕೆರಳುವಂತೆ ಮಾಡಿದೆ. ಈ ಅಕ್ರಮವನ್ನು ಎಸಿಬಿ ಯಾಕೆ ತನಿಖೆ ನಡೆಸುತ್ತಿಲ್ಲ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಯಡಿಯೂರಪ್ಪ ಅವರ ವಿರುದ್ಧ ಎಸಿಬಿ ತಪ್ಪು ದಾಖಲೆ ಸಲ್ಲಿಸಿದೆ ಎಂದು ನಾಗೇಶ್ ವಿವರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

SCROLL FOR NEXT