ಬೆಂಗಳೂರು: ಸ್ಟಾರ್ಟ್ ಅಪ್ ಯೋಜನೆಯನ್ನು ಜಾರಿಗೆ ತಂದ ಮೊದಲ ರಾಜ್ಯ ಕರ್ನಾಟಕ ಎಂದು ಹೇಳಿದ ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ, ಹೊಸ ಕಾರ್ಯಕ್ರಮಗಳನ್ನು ಜಾರಿಗೆ ತರುವ ಮೂಲಕ ರಾಜ್ಯ ಸರ್ಕಾರ ಸ್ಟಾರ್ಟ್ ಅಪ್ ಗೆ ಪ್ರೋತ್ಸಾಹ ನೀಡುತ್ತದೆ ಎಂದರು.
ದ ಟಾಕ್ ಬಿಗ್ ಐಡಿಯಾಸ್ ಸಭೆಯಲ್ಲಿ ಅವರು ಮಾತನಾಡಿದರು. ಅನೇಕ ಸ್ಟಾರ್ಟ್ ಅಪ್ ಗಳು, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳು ಮೊದಲಾದವು ಈ ಸಭೆಯಲ್ಲಿ ಭಾಗವಹಿಸಿದ್ದವು. ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಅದರಲ್ಲೂ ಬೆಂಗಳೂರಿನಲ್ಲಿ ಸ್ಟಾರ್ಟ್ ಅಪ್ ಹೆಚ್ಚಾಗಿರುತ್ತವೆ. ಐಟಿ, ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸ್ಟಾರ್ಟ್ ಅಪ್ ಕೋಶಗಳನ್ನು ಸರ್ಕಾರ ಗುರುತಿಸಿದೆ ಎಂದು ಹೇಳಿದರು.
ದೇಶದಲ್ಲಿ 7,200 ಸ್ಟಾರ್ಟ್ ಅಪ್ ಗಳಿದ್ದು ಅವುಗಳಲ್ಲಿ ರಾಜ್ಯ ಸರ್ಕಾರದ ಸ್ಟಾರ್ಟ್ ಅಪ್ ಕೋಶದಲ್ಲಿ 4,200 ಈಗಾಗಲೇ ದಾಖಲಾತಿ ಪಡೆದುಕೊಂಡಿವೆ ಎಂದರು.