ದೂರವಾಣಿ ಕದ್ದಾಲಿಕೆ ಮಾಡುತ್ತಿರುವುದು ಕೇಂದ್ರ ಸರ್ಕಾರ, ನಾವಲ್ಲ: ಸಿಎಂ ಸಿದ್ದರಾಮಯ್ಯ
ಆರ್ ಅಶೋಕ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ದೂರವಾಣಿ ಕದ್ದಾಲಿಕೆ ಮಾಡುತ್ತಿರುವುದು ಕೇಂದ್ರ ಸರ್ಕಾರವೇ ಹೊರತು ರಾಜ್ಯ ಸರ್ಕಾರವಲ್ಲ ಎಂದಿದ್ದಾರೆ.
ಬೆಂಗಳೂರು: ರಾಜ್ಯ ಸರ್ಕಾರ ಬಿಜೆಪಿ ನಾಯಕರ ದೂರವಾಣಿ ಕದ್ದಾಲಿಕೆ ಮಾಡುತ್ತಿದೆ ಎಂಬ ಬಿಜೆಪಿ ನಾಯಕ ಆರ್ ಅಶೋಕ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ದೂರವಾಣಿ ಕದ್ದಾಲಿಕೆ ಮಾಡುತ್ತಿರುವುದು ಕೇಂದ್ರ ಸರ್ಕಾರವೇ ಹೊರತು ರಾಜ್ಯ ಸರ್ಕಾರವಲ್ಲ ಎಂದಿದ್ದಾರೆ.
ದೂರವಾಣಿ ಕದ್ದಾಲಿಕೆ ಮಾಡುವ ಮಟ್ಟಕ್ಕೆ ರಾಜ್ಯ ಸರ್ಕಾರ ಇಳಿದಿಲ್ಲ. ದೂರವಾಣಿ ಕದ್ದಾಲಿಕೆ ಮಾಡುತ್ತಿರುವುದು ಕೇಂದ್ರ ಸರ್ಕಾರ ರಾಜ್ಯ ಸರ್ಕಾರವಲ್ಲ. ಆದರೆ ಈ ಬಗ್ಗೆ ರಾಜ್ಯ ಬಿಜೆಪಿ ನಾಯಕರಿಗೆ ಅರಿವಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ದೂರವಾಣಿ ಕದ್ದಾಲಿಕೆಯ ಆರೋಪವನ್ನು ನಾವೆಂದೂ ಮಾಡಿಲ್ಲ, ಏಕೆಂದರೆ ಅದನ್ನು ಸಣ್ಣ ವಿಷಯವೆಂದು ಪರಿಗಣಿಸಿದ್ದೇವೆ ಎಂದು ಸಿಎಂ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.