ರಾಜ್ಯ

ಸಿಎಂ ಸಿದ್ದರಾಮಯ್ಯ ವಿರುದ್ಧ ಎಸಿಬಿಗೆ ಆರ್ ಟಿ ಐ ಕಾರ್ಯಕರ್ತನ ದೂರು

Shilpa D
ಬೆಂಗಳೂರು: 1950 ರಲ್ಲಿ ಕೇಂದ್ರ ಸರ್ಕಾರ ಮೈಸೂರು ಮಹಾರಾಜರಿಗೆ ನೀಡಿದ್ದ ಭೂಮಿಯಲ್ಲಿ ಅಕ್ರಮ ಕಲ್ಲುಗಣಿಗಾರಿಕೆ ನಡೆಯುತ್ತಿದೆ ಎಂದು ಆರೋಪಿಸಿರುವ ಆರ್ ಟಿ ಐ ಕಾರ್ಯಕರ್ತ ಭ್ರಷ್ಟಾಚಾರ ನಿಗ್ರಹ ದಳದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಿಸಿದ್ದಾರೆ.
ಮಂಡ್ಯದ ಪಾಂಡವಪುರ ತಾಲ್ಲೂಕಿನ ಬೇಬಿ ಬೆಟ್ಟದಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿರುವ ವ್ಯಕ್ತಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವು ನೀಡುತ್ತಿದ್ದಾರೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ದೂರು ದಾಖಲಿಸಿದ್ದಾರೆ.
ಮಂಡ್ಯದಿಂದ 100 ಕಿಮೀ ದೂರದಲ್ಲಿರುವ ಬೇಬಿ ಬೆಟ್ಟದ ಅಮೃತ್‌ ಮಹಲ್‌ ಕಾವಲು ಪ್ರದೇಶದ ಸರ್ವೆ ನಂಬರ್‌ 1ರಲ್ಲಿ ಅನಧಿಕೃತವಾಗಿ ಗಣಿಗಾರಿಕೆ ನಡೆಯುತ್ತಿದೆ. ಈ ಜಮೀನಿನ ಆರ್ ಟಿಸಿಯಲ್ಲಿ  ಜಮೀನು ಮೈಸೂರು ಮಹಾರಾಜರಿಗೆ ಸೇರಿದ್ದು ಎಂಬುದಾಗಿ ಬರುತ್ತಿದೆ.
ಇದ ಮೈಸೂರು ಮಹಾರಾಜರ ಖಾಸಗಿ ಆಸ್ತಿಯಾಗಿದೆ, ಆದರೆ ಇದು ಸರ್ಕಾರಕ್ಕೆ ಸೇರಿದ್ದು ಎಂದು ಸರ್ಕಾರ ದಾಖಲೆ ಬದಲಾಯಿಸಿದೆ. ಇದನ್ನು ಸಿಎಂ ಸಿದ್ದರಾಮಯ್ಯ ಅವರ ಆದೇಶದ ಮೇರೆಗೆ ಬದಲಾಯಿಸಲಾಗಿದೆ ಎಂದು ಆರೋಪಿಸಿದ್ದಾರೆ.
SCROLL FOR NEXT