ಸಂಗ್ರಹ ಚಿತ್ರ 
ರಾಜ್ಯ

ಗೌರಿ ಲಂಕೇಶ್ ಹತ್ಯೆ ತನಿಖೆಗೆ ಪ್ರಮುಖ ತಿರುವು: ಎಸ್ ಐಟಿ ಬಳಿ ಹಂತಕನ ರೇಖಾಚಿತ್ರ!

ಹಿರಿಯ ಪತ್ರಕರ್ತೆ ಹಾಗೂ ವಿಚಾರವಾದಿ ಗೌರಿ ಲಂಕೇಶ್ ಹತ್ಯೆ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ ಹಂತಕರ ಕುರಿತು ಮಹತ್ವದ ಸುಳಿವು ದೊರೆತಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ಹಿರಿಯ ಪತ್ರಕರ್ತೆ ಹಾಗೂ ವಿಚಾರವಾದಿ ಗೌರಿ ಲಂಕೇಶ್ ಹತ್ಯೆ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ ಹಂತಕರ ಕುರಿತು ಮಹತ್ವದ ಸುಳಿವು ದೊರೆತಿದೆ ಎಂದು ತಿಳಿದುಬಂದಿದೆ.
ಮೂಲಗಳ ಪ್ರಕಾರ ಹತ್ಯೆ ಸಂದರ್ಭದಲ್ಲಿ ಸಿಸಿಟಿವಿ ಕ್ಯಾಮೆರಾಗಳಲ್ಲಿ ದಾಖಲಾಗಿರುವ ಹಂತಕರ ದೃಶ್ಯಾವಳಿಗಳು ಹಾಗೂ ಪ್ರತ್ಯದರ್ಶಿಗಳು ನೀಡಿರುವ ಮಾಹಿತಿ ಆಧರಿಸಿ ಹಂತಕರ ರೇಖಾಚಿತ್ರ ಬಿಡಿಸಲಾಗಿದ್ದು, ಅತ್ಯಾಧುನಿಕ ತಂತ್ರಜ್ಞಾನ ಬಳಕೆ ಮಾಡಿ ನುರಿತ ಚಿತ್ರಕಾರರಿಂದ ಹಂತಕರ ರೇಖಾಚಿತ್ರ ಬಿಡಿಸಲಾಗಿದೆ.  ಶೀಘ್ರದಲ್ಲೇ ರೇಖಾಚಿತ್ರದಲ್ಲಿರುವ  ಮುಖಚರ್ಯೆ ಹೋಲುವ ವ್ಯಕ್ತಿಗಳಿಗಾಗಿ ಅಧಿಕಾರಿಗಳು ತೀವ್ರ ಶೋಧ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ಅಲ್ಲದೆ ಈ ರೇಖಾಚಿತ್ರವನ್ನು ತನಿಖಾ ತಂಡದ ಅಧಿಕಾರಿಗಳು ವಿಚಾರವಾದಿ ಪನ್ಸಾರೆ, ದಾಬೋಲ್ಕರ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಅಧಿಕಾರಿಗಳಿಗೂ ಕಳಿಸಿದ್ದಾರೆ. ಆ ಮೂಲಕ ಹಂತಕನ ಮಾಹಿತಿ ಪಡೆಯುವ ಕೆಲಸ ನಡೆಯುತ್ತಿದೆ. ಇನ್ನು ಈ ರೇಖಾಚಿತ್ರವನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡುವ ಬಗ್ಗೆ ಅಂತಿಮ ನಿರ್ಧಾರ ಮಾಡಿಲ್ಲ ಎಂದು ತಿಳಿದುಬಂದಿದೆ.

ಇನ್ನು ಅತ್ತ ಘಟನೆ ನಡೆದ ರಾಜರಾಜೇಶ್ವರಿ ನಗರದಲ್ಲೂ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಹಂತಕರಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ. ಅಲ್ಲದೆ ರಾಜರಾಜೇಶ್ವರಿ ನಗರದ ಬೀದಿ ಬೀದಿಗಳಲ್ಲಿ ಹಂತಕರಗಿಗಾಗಿ ಪೊಲೀಸರು  ಕರಪತ್ರಗಳನ್ನು ಅಂಟಿಸಿದ್ದು, ಹಂತಕರ ಸುಳಿವು ನೀಡುವಂತೆ ಮನವಿ ಮಾಡಿದ್ದಾರೆ.

ಕಳೆದ ಸೆಪ್ಟೆಂಬರ್ 5ರಂದು ಕಚೇರಿಯಿಂದ ಮನೆಗೆ ವಾಪಸಾಗಿದ್ದ ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಬೈಕ್ ನಲ್ಲಿ ಹಿಂಬಾಲಿಸಿದ್ದ ದುಷ್ಕರ್ಮಿ ಅವರ ಮನೆ ಬಾಗಿಲ ಎದುರಲ್ಲೇ ಗುಂಡಿಟ್ಟು ಹತ್ಯೆಗೈದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT