ಸಿದ್ಧಗಂಗಾ ಶ್ರೀ (ಸಂಗ್ರಹ ಚಿತ್ರ) 
ರಾಜ್ಯ

ಸಿದ್ಧಗಂಗಾ ಶ್ರೀಗಳಿಗೆ ಅನಾರೋಗ್ಯ, ಬಿಜಿಎಸ್ ಆಸ್ಪತ್ರೆಗೆ ದಾಖಲು

ಸಿದ್ಧಗಂಗಾ ಮಠದ ಶ್ರೀಗಳಾದ ಶತಾಯುಷಿ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರನ್ನು ಅನಾರೋಗ್ಯದ ಕಾರಣ ಬೆಂಗಳೂರಿನ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬೆಂಗಳೂರು: ಸಿದ್ಧಗಂಗಾ ಮಠದ ಶ್ರೀಗಳಾದ ಶತಾಯುಷಿ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರನ್ನು ಅನಾರೋಗ್ಯದ ಕಾರಣ ಬೆಂಗಳೂರಿನ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮೂಲಗಳ ಪ್ರಕಾರ ಶ್ರೀಗಳಿಗೆ ಗಂಭೀರ ಸಮಸ್ಯೆ ಏನೂ ಆಗಿಲ್ಲ. ಆದರೆ ಕಫ, ಜ್ವರ ಹಾಗೂ ಗಂಟಲು ಕಟ್ಟುವಿಕೆ ಸಮಸ್ಯೆಯಿಂದಾಗಿ ಶ್ರೀಗಳು ಬಳಲುತ್ತಿದ್ದರು. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಬಾಲಗಂಗಾಧರನಾಥ  ಸ್ವಾಮಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.

ಇನ್ನು ಶ್ರೀಗಳನ್ನು ಪರೀಕ್ಷಿಸಿರುವ ವೈದ್ಯರು ಶ್ರೀಗಳಿಗೆ ಗಂಭೀರ ಸಮಸ್ಯೆ ಏನೂ ಆಗಿಲ್ಲ. ಆದರೆ ಮುಂಜಾಗ್ರತಾ ಕ್ರಮವಾಗಿ ಶ್ರೀಗಳನ್ನು ಬೆಂಗಳೂರು ಆಸ್ಪತ್ರೆಗೆ ರವಾನೆ ಮಾಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಹಿಂದೆಯೂ ಶ್ರೀಗಳು ಶ್ವಾಸಕೋಶದ ಸೋಂಕಿನಿಂದ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!

'ಮತದಾರರ ಪಟ್ಟಿ ಪರಿಷ್ಕರಣೆ'ಯಲ್ಲಿ ಅಕ್ರಮ ಆರೋಪ; CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ, INDIA ಒಕ್ಕೂಟದಿಂದ ‘ಪ್ರಜಾಪ್ರಭುತ್ವ ಉಳಿಸಿ’ ಪಾದಯಾತ್ರೆ ಆರಂಭ..!

ಶಾಲೆಗಳಲ್ಲಿ ಸಂವಿಧಾನದ ಪ್ರಸ್ತಾವನೆ ಪಠಣೆ: ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್!

9/11 ಮಾದರಿಯಲ್ಲೇ ಇಸ್ರೇಲ್ ಧ್ವಂಸಕ್ಕೆ ಸಂಚು..! ಫ್ಲೈದುಬೈ ಏರ್‌ಲೈನ್ಸ್ ಸೇರಿದ್ದೇ ಆ ಕ್ರೂರ ಉದ್ದೇಶಕ್ಕಾಗಿ; ಸತ್ಯ ಬಾಯಿಬಿಟ್ಟ ಕಿಲ್ಲರ್ ಪೈಲಟ್ ಹಮಾಮ್..!