ಬೆಂಗಳೂರು: ಅಧಿಕಾರಿಗಳಿಗೆ ಲಂಚ ಪಡೆಯಲು ಕುಮ್ಮಕ್ಕು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಸಚಿವ ಎಚ್,ಸಿ ಮಹಾದೇವಪ್ಪ ಪುತ್ರ ಸುನೀಲ್ ಬೋಸ್ ಗೆ ಮೈಸೂರು ನ್ಯಾಯಾಲಯ ನೀಡಿದ್ದ ಸಮನ್ಸ್ ಗೆ ಹೈಕೋರ್ಟ್ ತಡೆ ನೀಡಿದೆ.
ಸಮನ್ಸ್ ಗೆ ತಡೆ ನೀಡುವಂತೆ ಕೋರಿ ಸುನೀಲ್ ಬೋಸ್ ಮತ್ತು ಆತನ ಸ್ನೇಹಿತ ರಾಜು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ ಆದೇಶ ನೀಡಿದೆ.
ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ಸುನೀಲ್ ಬೋಸ್, ಮೂರನೇ ಆರೋಪಿಯಾಗಿರುವ ಬೋಸ್ ಸ್ನೇಹಿತ ರಾಜು ವಿರುದ್ಧ ಯಾವುದೇ ಬಲವಾದ ಸಾಕ್ಷಿಗಳು ಇಲ್ಲ ಎಂದು ನ್ಯಾಯಪೀಠವು ಅಭಿಪ್ರಾಯ ಪಟ್ಟಿದೆ.
2010 ರಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಆಲ್ಫೋಸಿಸ್ ಗೆ ಮರಳು ಸಾಗಾಟ ಮಾಡುವ ಟ್ರಕ್ ವೊಂದಕ್ಕೆ 800 ರು. ಲಂಚ ಪಡೆಯಲು ಸಚಿವರ ಪುತ್ರ ಸುನೀಲ್ ಬೋಸ್ ಪ್ರೇರೇಪಿಸಿದ್ದರು ಎಂದು ಆರೋಪಿಸಲಾಗಿತ್ತು.