ವಿಧಾನಪರಿಷತ್ ವಿರೋಧ ಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ 
ರಾಜ್ಯ

ವಿನಯ್ ನನ್ನ ಆಪ್ತ ಸಹಾಯಕನಲ್ಲ, ನನಗೂ ಆತನಿಗೂ ಯಾವುದೇ ಸಂಬಂಧವಿಲ್ಲ: ಈಶ್ಪರಪ್ಪ ಸ್ಪಷ್ಟನೆ

ವಿನಯ್ ನನ್ನ ಆಪ್ತ ಸಹಾಯಕನಲ್ಲ. ನನಗೂ ಆತನಿಗೂ ಯಾವುದೇ ಸಂಬಂಧವಿಲ್ಲ ಎಂದು ವಿಧಾನಪರಿಷತ್ ವಿರೋಧ ಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರು ಭಾನುವಾರ ಸ್ಪಷ್ಟಪಡಿಸಿದ್ದಾರೆ...

ಶಿವಮೊಗ್ಗ: ವಿನಯ್ ನನ್ನ ಆಪ್ತ ಸಹಾಯಕನಲ್ಲ. ನನಗೂ ಆತನಿಗೂ ಯಾವುದೇ ಸಂಬಂಧವಿಲ್ಲ ಎಂದು ವಿಧಾನಪರಿಷತ್ ವಿರೋಧ ಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರು ಭಾನುವಾರ ಸ್ಪಷ್ಟಪಡಿಸಿದ್ದಾರೆ. 
ಈ ಕುರಿತಂತೆ ಮಾತನಾಡಿರುವ, ವಿನಯ್ ನನ್ನ ಆಪ್ತ ಸಹಾಯಕನಲ್ಲ. ನನಗೂ ವಿನಯ್ ಗೂ ಯಾವುದೇ ಸಂಬಂಧವಿಲ್ಲ. ಇನ್ನು ಮುಂದೆ ಮಾಧ್ಯಮಗಳು ವಿನಯ್ ನನ್ನ ಆಪ್ತ ಸಹಾಯಕನೆಂದು ಬರೆಯುವುದನ್ನು ಹಾಗೂ ಸುದ್ದಿ ಪ್ರಕಟಿಸುವುದನ್ನು ನಿಲ್ಲಿಸಬೇಕೆಂದು ಹೇಳಿದ್ದಾರೆ. 
ಈ ಕುರಿತಂತೆ ನ್ಯಾಯಾಲಯದಲ್ಲಿ ನಾನೂ ದಾವೆಯನ್ನು ಹೂಡಿದ್ದು, ತಡೆ ಆಜ್ಞೆಯನ್ನು ತಂದಿದ್ದೇನೆ. ಅಪಹರಣ ಯತ್ನ ಪ್ರಕರಣದಲ್ಲಿ ವಿನಯ್ ನನ್ನ ಆಪ್ತ ಸಹಾಯಕನೆಂದು ಮಾಧ್ಯಮಗಳು ಸುದ್ದಿಯನ್ನು ಬಿತ್ತರಿಸದಂತೆ ನ್ಯಾಯಾಲಯ ಆದೇಶ ನೀಡಿದೆ ಎಂದು ತಿಳಿಸಿದ್ದಾರೆ. 
ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ದ ವಾಗ್ದಾಳಿ ನಡೆಸಿರುವ ಅವರು, ಶೀಘ್ರದಲ್ಲಿಯೇ ತಮ್ಮ ಅಧಿಕಾರ ಅಂತ್ಯ ಕಾಣಲಿದೆ ಎಂಬುದನ್ನು ಸಿದ್ದರಾಮಯ್ಯ ಅವರು ನೆನಪಿಸಿಕೊಳ್ಳಬೇಕಿದೆ. ಯಡಿಯೂರಪ್ಪ ಅವರಿಗೆ ಮೀಟರ್ ಇಲ್ಲ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಇದು ನಿಜಕ್ಕೂ ಖಂಡನೀಯವಾದದ್ದು. ಲೋಕಸಭಾ ಸದಸ್ಯರು ಹಾಗೂ ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷರೊಬ್ಬರ ಬಗ್ಗೆ ಗೌರವವಿಲ್ಲದೆಯೇ ಮಾತನಾಡಿರುವುದು ನಿಜಕ್ಕೂ ಖಂಡನೀಯ ಎಂದು ಹೇಳಿದ್ದಾರೆ. 
ಮಧುಗಿರಿ ಶಾಸಕ ಕೆ.ಎನ್. ರಾಜಣ್ಣ ಮತ್ತು ಹಂಪಿ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ.ಮಲ್ಲಿಕಾ ಘಾಂಟಿ ಅವರು ಸರ್ಕಾರ ವೈಫಲ್ಯಗಳನ್ನು ಬಹಿರಂಗಪಡಿಸಿದ್ದಾರೆ. ದುರಾದೃಷ್ಟಕರ ಸಂಗತಿಯೆಂದರೆ, ಆರೋಗ್ಯ ಸಚಿವ ರಮೇಶ್ ಕುಮಾರ್ ಅವರು ಆ ಆರೋಪಗಳನ್ನು ಸಮರ್ಥಿಸಿಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷ ದೊಡ್ಡ ಕಳ್ಳರ ಪಕ್ಷವೆಂಬುದು ಇದರಿಂದಲೇ ಸಾಬೀತಾಗುತ್ತಿದೆ ಎಂದಿದ್ದಾರೆ. 
ಕೆಲ ವ್ಯಕ್ತಿಗಳು ಯಡಿಯೂರಪ್ಪ, ಈಶ್ವರಪ್ಪ, ಸಿ.ಟಿ.ರವಿ ಹಾಗೂ ಇನ್ನಿತರೆ ಬಿಜೆಪಿ ನಾಯಕರು ವಿವಿಧ ಕ್ಷೇತ್ರಗಳಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆಂಬ ವದಂತಿಗಳನ್ನು ಹಬ್ಬಿಸುತ್ತಿದ್ದಾರೆ. ಮಾಧ್ಯಮಗಳು ಕಾಂಗ್ರೆಸ್ ಪಕ್ಷದ ಹೈ ಕಮಾಂಡ್, ರಾಜ್ಯಧ್ಯಕ್ಷರಾಗಿರುವುದು ದುರಾದೃಷ್ಟಕರ. ಮಾಧ್ಯಮಗಳು ತಮ್ಮಗನ್ನಿಸಿದ್ದನ್ನು ಪ್ರಕಟಿಸುತ್ತಿವೆ, ಬರೆಯುತ್ತಿವೆ ಎಂದು ಕಿಡಿಕಾರಿದ್ದಾರೆ. 
ಮುಂದಿನ ಚುನಾವಣೆಯಲ್ಲಿ ಯಡಿಯೂರಪ್ಪ ಅವರ ಯಾವ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಾರೆಂಬುದು ನನಗೂ ಗೊತ್ತಿಲ್ಲ. ಆದರೆ, ನಾನು ಶಿವಮೊಗ್ಗದಿಂದ ಯಾವ ಕ್ಷೇತ್ರದಲ್ಲಿಯೂ ಸ್ಪರ್ಧೆಗೆ ನಿಲ್ಲುತ್ತಿಲ್ಲ. ಮಾಧ್ಯಮಗಳು ಸುದ್ದಿ ಬಿತ್ತರಿಸುವುತ್ತಿರುವಂತೆ ಇತರೆ ನಾಯಕರೂ ಕೂಡ ಸ್ಪರ್ಧಿಸುತ್ತಿಲ್ಲ. ಬಿಜೆಪಿ ಸಭೆಗೆ ಈಶ್ವರಪ್ಪ ಬೆಂಬಲಿಗರನ್ನು ಆಹ್ವಾನಿಸಿಲ್ಲ ಎಂಬ ಸುದ್ದಿಗಳೂ ಕೂಡ ಸತ್ಯಕ್ಕೆ ದೂರವಾದದ್ದು ಎಂದಿದ್ದಾರೆ. 
ಇದೇ ವೇಳೆ ಎಂಎಲ್'ಸಿ ಚುನಾವಣೆ ಕುರಿತಂತೆ ಮಾತನಾಡಿರುವ ಅವರು, ಬಿಜೆಪಿ ಈಗಾಗಲೇ ಒಂದು ಸುತ್ತಿನ ಪ್ರಚಾರವನ್ನು ಪೂರ್ಣಗೊಳಿಸಿದೆ. ಕಾಂಗ್ರೆಸ್ ನಲ್ಲಿ ಕೇವಲ ಒಬ್ಬ ವ್ಯಕ್ತಿ ಮಾತ್ರ ಅಭ್ಯರ್ಥಿಯಾಗಿದ್ದರೆ, ಬಿಜೆಪಿಯಲ್ಲಿ ಇಡೀ ಪಕ್ಷವೇ ಅಭ್ಯರ್ಥಿಯಾಗಿದೆ. ವ್ಯವಸ್ಥಿತ ಮಾರ್ಗದಲ್ಲಿ ಪಕ್ಷ ಪ್ರಚಾರ ಕಾರ್ಯಗಳನ್ನು ನಡೆಸುತ್ತಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT