ದಿಲೀಪ್ ಕುಮಾರ್ 
ರಾಜ್ಯ

ಬೆಂಗಳೂರು: ಐರನ್ ಬಾಕ್ಸ್ ನಿಂದ ಪತ್ನಿಯ ಗುಪ್ತಾಂಗ ಸುಟ್ಟ ಕ್ರೂರಿ ಪತಿ ಬಂಧನ

ತವರು ಮನೆಯಿಂದ ಚಿನ್ನಾಭರಣ ತರಲಿಲ್ಲವೆಂಬ ಕಾರಣಕ್ಕೆ ಐರನ್ ಬಾಕ್ಸ್ ನಿಂದ ತನ್ನ ಪತ್ನಿಯ ಗುಪ್ತಾಂಗ ಸುಟ್ಟಿದ್ದಲದೆ ಚಾಕುವಿನಿಂದ ....

ಬೆಂಗಳೂರು: ತವರು ಮನೆಯಿಂದ ಚಿನ್ನಾಭರಣ ತರಲಿಲ್ಲವೆಂಬ ಕಾರಣಕ್ಕೆ ಐರನ್ ಬಾಕ್ಸ್ ನಿಂದ ತನ್ನ ಪತ್ನಿಯ ಗುಪ್ತಾಂಗ ಸುಟ್ಟಿದ್ದಲದೆ ಚಾಕುವಿನಿಂದ ಗಂಭೀರವಾಗಿ ಹಲ್ಲೆ ನಡೆಸಿದ ಆರೋಪದ ಮೇಲೆ ಕ್ರೂರಿ ಪತಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಲಿಂಗರಾಜಪುರಂ ನಿವಾಸಿ 26 ವರ್ಷದ ಮಹಿಳೆಯೊಬ್ಬರು ತನ್ನ ಪತಿ ದಿಲೀಪ್ ಕುಮಾರ್(32) ಕಳೆದ ಭಾನುವಾರ ರಾತ್ರಿ ಕುಡಿದು ಬಂದು ತನ್ನನ್ನು ಹಿಗ್ಗಾಮುಗ್ಗಾ ಥಳಿಸಿದ್ದಲ್ಲದೆ ಸುಡುತ್ತಿರುವ ಐರನ್ ಬಾಕ್ಸ್ ನಿಂದ ಸುಟ್ಟಿರುವುದಾಗಿ ದೂರಿನಲ್ಲಿ ಆರೋಪಿಸಿದ್ದಾರೆ.
ಕುಡಿದು ಬಂದಿದನ್ನು ಪತ್ನಿ ಪ್ರಶ್ನೆ ಮಾಡಿದ್ದಕ್ಕೆ ಆಕ್ರೋಶಗೊಂಡ ಪತಿ, ತವರು ಮನೆಯಿಂದ ಒಡವೆ ತರದ ನೀನು ನನ್ನನ್ನು ಪ್ರಶ್ನಿಸುತ್ತೀಯಾ ಎಂದು ಬೈದು ಪತ್ನಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಪತಿಯಿಂದ ಹಲ್ಲೆಗೊಳಗಾದ ಪತ್ನಿಯನ್ನು ನಗರದ ಅಂಬೇಡ್ಕರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.
ಈ ಸಂಬಂಧ ಐಪಿಸಿ ಸೆಕ್ಷನ್ 326ರ ಅಡಿಯಲ್ಲಿ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿ ದಿಲೀಪ್ ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!