ರಾಜ್ಯ

ಕರ್ನಾಟಕ ಮೌಢ್ಯ ಪ್ರತಿಬಂಧಕ ಕಾಯ್ದೆಗೆ ಕ್ಯಾಬಿನೆಟ್ ಅನುಮೋದನೆ

Raghavendra Adiga
ಬೆಂಗಳೂರು: ಕರ್ನಾಟಕ ಸರ್ಕಾರದ ಬಹು ಚರ್ಚಿತ 'ಮೌಢ್ಯ ಪ್ರತಿಬಂಧಕ ಕಾಯ್ದೆ' ಈಗ ಪುನಃ ಸದ್ದು ಮಾಡುತ್ತಿದೆ. ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡನೆಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. 
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮಸೂದ ಮಂಡನೆಗೆ ಒಪ್ಪಿಗೆ ಸಿಕ್ಕಿದೆ. ಮುಂದಿನ ಬೆಳಗಾವಿ ಅಧಿವೇಶನದಲ್ಲಿ ಈ ಕುರಿತ ಮಸೂದೆ ಮಂಡನೆ ಮಾಡಲಾಗುತ್ತದೆ.
ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಕಾನೂನು ಸಚಿವ ಟಿ.ಬಿ.ಜಯಚಂದ್ರ ಈ ಕುರಿತಂತೆ ಮಾಹಿತಿ ನೀಡಿದ್ದಾರೆ.
ಕಾಯ್ದೆ ಜಾರಿಯಾದ ಬಳಿಕ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಆಚರಣೆಯಲ್ಲಿರುವ ಮಡೆ ಸ್ನಾನ, ಉತ್ತರ ಮಧ್ಯ ಕರ್ನಾಟಕ ಭಾಗಗಳಲ್ಲಿ ನಡೆಯುವ ಸಿಡಿ ಸೇವೆ, ಬೆತ್ತಲೆ ಸೇವೆಗಳು ನಿಷೇಧಕ್ಕೆ ಒಳಗಾಗುತ್ತವೆ. ಆದರೆ ಜ್ಯೋತಿಷ್ಯ, ವಾಸ್ತುವಿಗೆ ಈ ಕಾಯ್ದೆಯಿಂದ ಯಾವ ಅಡ್ಡಿಯುಂಟಾಗುವುದಿಲ್ಲ.
SCROLL FOR NEXT