ಮಳೆ 
ರಾಜ್ಯ

ಬೆಂಗಳೂರು: 12 ವರ್ಷಗಳಲ್ಲೇ ಮೊದಲ ಬಾರಿ ಸೆಪ್ಟೆಂಬರ್ ನಲ್ಲಿ ದಾಖಲೆ ಪ್ರಮಾಣದ ಮಳೆ

ಸೆಪ್ಟೆಂಬರ್ ತಿಂಗಳಲ್ಲಿ ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿದಿದ್ದು 12 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಸೆಪ್ಟೆಂಬರ್ ತಿಂಗಳಲ್ಲಿ ದಾಖಲೆ ಪ್ರಮಾಣದ ಮಳೆಯಾಗಿದೆ.

ಬೆಂಗಳೂರು: ಸೆಪ್ಟೆಂಬರ್ ತಿಂಗಳಲ್ಲಿ ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿದಿದ್ದು 12 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಸೆಪ್ಟೆಂಬರ್ ತಿಂಗಳಲ್ಲಿ ದಾಖಲೆ ಪ್ರಮಾಣದ ಮಳೆಯಾಗಿದೆ. 
1986 ರ ಸೆಪ್ಟೆಂಬರ್ ನಲ್ಲಿ 516.6 ಮಿಲೀಮೀಟರ್ ಮಳೆಯಾಗಿತ್ತು. ಆ ಬಳಿಕ 2005 ರಲ್ಲಿ ಅತಿ ಹೆಚ್ಚು ಮಳೆಯಾಗಿತ್ತು, ನಂತರ 2013 ರಲ್ಲಿ 352.6 ಮಿಲೀ ಮೀಟರ್ ಮಳೆಯನ್ನು ಹೊರತುಪಡಿಸಿದರೆ ಈಗ 2017 ರ ಸೆಪ್ಟೆಂಬರ್ ತಿಂಗಳಲ್ಲಿ 354.28 ಮಿಲೀಮೀಟರ್ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ವರದಿ ಮೂಲಕ ತಿಳಿದುಬಂದಿದೆ. 
ನಗರದ ಕೆಲವು ಪ್ರದೇಶಗಳಲ್ಲಿ 35.5 ಮಿ.ಮೀ ಮಳೆಯಾಗಿದ್ದರೆ ಕೆಲವು ಪ್ರದೇಶಗಳಲ್ಲಿ 640.5 ಮಿ.ಮೀ ಮಳೆಯಾಗಿದೆ. ದಕ್ಷಿಣ ಹಾಗೂ ಪೂರ್ವ ಬೆಂಗಳೂರಿನಲ್ಲಿ ಸೆಪ್ಟೆಂಬರ್ ತಿಂಗಳಲ್ಲಿ ಸುರಿದಿರುವ ಮಳೆಯ ಪ್ರಮಾಣ 516.6 ಮಿಮೀ ನಷ್ಟಾಗಿದೆ. 
ಸೆ.27 ರಂದೂ ಸಹ ಮಳೆಯಾಗಲಿದ್ದು ಎಂದಿಗಿಂತ 100 ಮಿಮೀ ನಷ್ಟು ಹೆಚ್ಚಿನ ಮಳೆ ಬರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!