ಜಗದೀಶ್ ಕಾರಂತ್, 
ರಾಜ್ಯ

ಹಿಂದೂ ಜಾಗರಣ ವೇದಿಕೆ ನಾಯಕ ಜಗದೀಶ್ ಕಾರಂತ ಬಂಧನ

ಹಿಂದೂ ಜಾಗರಣ ವೇದಿಕೆ ನಾಯಕ ಜಗದೀಶ್ ಕಾರಂತ ರನ್ನು ಪೋಲೀಸರು ಇಂದು ಬಂಧಿಸಿದ್ದಾರೆ.

ಬೆಂಗಳೂರು: ಹಿಂದೂ ಜಾಗರಣ ವೇದಿಕೆ ನಾಯಕ  ಜಗದೀಶ್ ಕಾರಂತ ರನ್ನು ಪೋಲೀಸರು ಇಂದು ಬಂಧಿಸಿದ್ದಾರೆ.
ಪುತ್ತೂರು ಸಂಪ್ಯ ಪೊಲೀಸ್ ಅಧಿಕಾರಿ ಅಬ್ದುಲ್ ಖಾದರ್ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕಾರಂತ ಬಂಧನವಾಗಿದೆ.
ಸೆ.15 ರಂದು ಪುತ್ತೂರಿನಲ್ಲಿ ನಡೆದ ಹಿಂದೂ ಜಾಗರಣ ವೇದಿಕೆಯ ಪ್ರತಿಭಟನೆಯಲ್ಲಿ ಜಗದೀಶ್ ಕಾರಂತ್ ಸಂಪ್ಯ ಪೋಲೀಸ್ ಅಧಿಕಾರಿ  ಅಬ್ದುಲ್ ಖಾದರ್ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಅವರ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದರು.
ಈ ಸಂಬಂಧ ಪುತ್ತೂರು ನಗರ ಪೋಲೀಸರು ಪ್ರತಿಭಟನೆ ನಡೆದ ಒಂದು ವಾರದ ಬಳಿಕ ಸ್ವಯಂಪ್ರೇರಿತ ದೂರು ದಾಖಲಿಸಿದ್ದರು
ಈ ಸಂಬಂಧ ಬಿಹಾರದಲ್ಲಿ ಜಾಗರಣ ವೇದಿಕೆಯ ಬೈಠಕ್ ಮುಗಿಸಿ ಬೆಂಗಳೂರಿಗೆ ಆಗಮಿಸಿದ ಕಾರಂತರನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.
ದಕ್ಷಿಣಕನ್ನಡ ಜಿಲ್ಲಾ ಅಪರಾಧ ಪತ್ತೆದಳ ಕಾರಂತ ರನ್ನು ಬಂಧಿಸಿದೆ. ಜಗದೀಶ ಕಾರಂತರ ವಿರುದ್ಧ ಪುತ್ತೂರಿನಲ್ಲಿ ಪ್ರಕರಣ ದಾಖಲಿಸಿರುವ ಹಿನ್ನಲೆಯಲ್ಲಿ ಅವರನ್ನು ಪುತ್ತೂರು ನ್ಯಾಯಾಧೀಶರ ಮುಂದೆ ಪೋಲೀಸರು ಹಾಜರುಪಡಿಸುವ ಸಾಧ್ಯೆತೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿ: 6 ಅಂತಸ್ತಿನ ಕಟ್ಟಡ ಕುಸಿತ; ಓರ್ವ ಸಾವು, ಹಲವರು ಸಿಲುಕಿರುವ ಶಂಕೆ

ಉಡುಪಿ: ವಿಟ್ಲಪಿಂಡಿ ಉತ್ಸವದ ವೇಳೆ ಸ್ವಾಮೀಜಿಗಳ ಕೈಯಿಂದ ಜಾರಿದ ಶ್ರೀಕೃಷ್ಣನ ಉತ್ಸವ ಮೂರ್ತಿ, ಭಕ್ತರಲ್ಲಿ ಹೆಚ್ಚಿದ ಆತಂಕ!

ಮಧ್ಯಪ್ರದೇಶದಲ್ಲಿ ನಕಲಿ ಮದ್ಯ ಸೇವಿಸಿ 12 ಮಂದಿ ಸಾವು, ಹಲವರ ಸ್ಥಿತಿ ಗಂಭೀರ! ಕಠಿಣ ಕ್ರಮಕ್ಕೆ ಸಿಎಂ ಆದೇಶ

Maruti Suzuki Baleno ಹೊಸ ಆವೃತ್ತಿ ಬಿಡುಗಡೆ: ಬೆಲೆ, ಮೈಲೇಜ್, ವೈಶಿಷ್ಟ್ಯ: ಕಾರು ಖರೀದಿಸುವ ಮುನ್ನ ನೀವು ತಿಳಿಯಬೇಕಾದ ಅಂಶಗಳಿವು...

ಫೋನ್ ಕರೆ ಸ್ವೀಕರಿಸಲು ಬೈಕ್ ನಿಲ್ಲಿಸಿದ್ದ ಕುಟುಂಬಕ್ಕೆ ವೇಗದ ಕಾರು ಡಿಕ್ಕಿ; 3 ವರ್ಷದ ಮಗು ಸೇರಿ ಮೂವರ ಸಾವು